ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸಿಟಿ- ಹಳಿಯಾಳ ಹಾಗೂ ಜೆಸಿಬಿ ಇಂಡಿಯಾ ಇವರ ಜಂಟಿ ಸಹಯೋಗದಲ್ಲಿ 30 ದಿನಗಳ ರೆಪ್ರಿಜಿರೇಟರ್/ಎರ್ ಕಂಡಿಷನರ್ ರಿಪೇರಿ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದೆ. ಇದರ ಪ್ರಯೋಜನ ಪಡೆಯುವಂತೆ ಕೋರಲಾಗಿದೆ.
READ | ಜೆಸಿಬಿ ಆಪರೇಟರ್ ತರಬೇತಿ, ಆಸಕ್ತರು ಇಲ್ಲಿಗೆ ಅರ್ಜಿ ಸಲ್ಲಿಸಬಹುದು
ಯಾರೆಲ್ಲ ಅರ್ಹರು, ಏನು ದಾಖಲಾತಿ ಬೇಕು?
18-45 ವರ್ಷ ವಯೋಮಿತಿಯೊಳಗಿನ ಯುವಕರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ, ಹಾಲಿ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳನ್ನೊಳಗೊಂಡ ಅರ್ಜಿಯನ್ನು ಜನವರಿ 31 ರೊಳಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸಿಟಿ, ವಿಸ್ತರಣಾ ಕೇಂದ್ರ ಹಸನಮಾಳ್, ದಾಂಡೇಲಿ-581325, ವಿಳಾಸಕ್ಕೆ ಕಳುಹಿಸುವುದು. ಅಥವಾ ಮೊ.ಸಂ.: 08284-298547/ 9731842849/ 9731842849 / 9449782425 ಗಳಿಗೆ ವಾಟ್ಸ್ ಆ್ಯಪ್ ಮೂಲಕ ಕಳುಹಿಸುವಂತೆ ತಿಳಿಸಲಾಗಿದೆ.
ತರಬೇತಿಯು ಊಟೋಪಚಾರ ಹಾಗೂ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, ತರಬೇತಿಯ ನಂತರ ಉದ್ಯೋಗ ನಿಯೋಜನೆ ಮಾರ್ಗದರ್ಶನ ನೀಡಲಾಗುವುದು.
https://suddikanaja.com/2023/01/19/shimoga-dcc-bank-result-annonced/