ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದ ಹೊರ ವಲಯದ ಸೋಗಾನೆಯಲ್ಲಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣಕ್ಕೆ ಸುರಕ್ಷತಾ ಹಿನ್ನೆಲೆಯಲ್ಲಿ ಅನುಮತಿ ಇಲ್ಲದೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ತಿಳಿಸಿದ್ದಾರೆ.
READ | ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ದಿನಾಂಕ ನಿಗದಿ ಬೆನ್ನಲ್ಲೇ ಉಗ್ರ ಸ್ವರೂಪದ ಹೋರಾಟದ ಎಚ್ಚರಿಕೆ, ಕಾರಣವೇನು?
ನಿರ್ಬಂಧಕ್ಕೇನು ಕಾರಣ?
ವಿಮಾನ ನಿಲ್ದಾಣದ ಕಾಮಗಾರಿಗಳು ಅಂತಿಮ ಹಂತದಲ್ಲಿದ್ದು, ಕೆಲವೇ ದಿನಗಳಲ್ಲಿ ಕೇಂದ್ರದಿಂದ ಡಿಜಿಸಿಎ ತಂಡ ಪರಿಶೀಲನೆಗೆ ಆಗಮಿಸಲಿದೆ. ಇದಲ್ಲದೆ ವಿಮಾನ ನಿಲ್ದಾಣದಲ್ಲಿರುವ ಸೂಕ್ಷ್ಮ ಉಪಕರಣಗಳ ಸುರಕ್ಷತೆಯ ಹಿನ್ನೆಲೆಯಲ್ಲಿ ಮತ್ತು ಕಾಮಗಾರಿಗಳಿಗೆ ತೊಡಕಾಗದಂತೆ, ಸಾರ್ವಜನಿಕರ ಪ್ರವೇಶವನ್ನು ಉದ್ಘಾಟನೆ ಆಗುವವರೆಗೆ ನಿರ್ಬಂಧಿಸಲಾಗಿದೆ.
ನೂತನ ವಿಮಾನ ನಿಲ್ದಾಣ ವೀಕ್ಷಣೆಗೆ ನೂರಾರು ಜನರು ಆಗಮಿಸಿ, ರನ್ ವೇಯಲ್ಲಿ ವಾಹನ ಚಲಾಯಿಸುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ ಅವರು ಮನವಿ ಮಾಡಿದ್ದಾರೆ.