Job fair | ಶಿವಮೊಗ್ಗದಲ್ಲಿ ಉದ್ಯೋಗ ಮೇಳ, ಎಸ್‍ಎಸ್‍ಎಲ್‍ಸಿ ಪಾಸ್ ಆದವರೂ ಪಾಲ್ಗೊಳ್ಳಲು ಅವಕಾಶ, ಪ್ರತಿಷ್ಠಿತ ಕಂಪನಿಗಳು ಭಾಗಿ

Job Fair

 

 

ಸುದ್ದಿ ಕಣಜ.ಕಾಂ‌ ಶಿವಮೊಗ್ಗ
SHIVAMOGGA: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ (District Employment Exchange Office)ಯು ಜ.24 ರಂದು ಬೆಳಗ್ಗೆ 10 ಕ್ಕೆ ಗುತ್ತ್ಯಪ್ಪ ಕಾಲೋನಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ(Job fair)ವನ್ನು ಆಯೋಜಿಸಿದೆ.
ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲ್ಲಿದ್ದಾರೆ.

READ | ಸಿ ವೃಂದದ ಹುದ್ದೆಗೆ ನೇಮಕಾತಿ ತಿದ್ದುಪಡಿ, ಉದ್ಯೋಗ ಆಕಾಂಕ್ಷಿಗಳು ಓದಿ

ಯಾರೆಲ್ಲ‌ ಪಾಲ್ಗೊಳ್ಳಬಹುದು?
ಎಸ್‍ಎಸ್‍ಎಲ್‍ಸಿ(SSLC), ಪಿಯುಸಿ(PUC), ಐಟಿಐ(ITI), ಡಿಪ್ಲೊಮಾ(Diploma), ಯಾವುದೇ ಪದವಿ (any degree) ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೇಟಾ(ರೆಸ್ಯೂಮ್) ಮತ್ತು ಆಧಾರ್ ಕಾರ್ಡ್ ಪ್ರತಿ ತೆಗೆದುಕೊಂಡು ಸಂದರ್ಶನ(interview)ದಲ್ಲಿ ಭಾಗವಹಿಸಬಹುದು. ಪ್ರವೇಶ ಉಚಿತವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ದೂ.ಸಂ: 08182-255293, 9380663606 / 9482023412 ನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!