ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದ ನೆಹರೂ ಕ್ರೀಡಾಂಗಣದಲ್ಲಿ ಜ.15ರಂದು ಬೆಳಗ್ಗೆ 10ಕ್ಕೆ ವಾಲಿಬಾಲ್ ಟೀಂ ಆಯ್ಕೆ ಪ್ರಕ್ರಿಯೆ(Volleyball team selection) ನಡೆಯಲಿದೆ ಎಂದು ಶಿವಮೊಗ್ಗ ಜಿಲ್ಲಾ ವಾಲಿಬಾಲ್ ಸಂಸ್ಥೆಯ ಕಾರ್ಯದರ್ಶಿ ಲೋಕೇಶ್ ತಿಳಿಸಿದರು.
ಮಾಧ್ಹಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ವಾಲಿಬಾಲ್ ಅಸೋಷಿಯೇಷನ್ ವತಿಯಿಂದ ಮೈಸೂರಿನಲ್ಲಿ ಜ.25ರಿಂದ 29ರವರೆಗೆ ನಡೆಯಲಿರುವ ಅಂತರ ಜಿಲ್ಲಾ ವಾಲಿಬಾಲ್ ಪಂದ್ಯಾವಳಿಗೆ ಶಿವಮೊಗ್ಗ ಜಿಲ್ಲಾ ತಂಡ ರಚಿಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ವಾಲಿಬಾಲ್ ಕ್ರೀಡಾಪಟುಗಳಿಗೆ ಇದು ಸುವರ್ಣ ಅವಕಾಶವಾಗಿದ್ದು, ಆಯ್ಕೆ ಪ್ರಕ್ರಿಯೆಯಲ್ಲಿ ಹೆಚ್ಚಿನ ಕ್ರೀಡಾಪಟುಗಳು ಆಗಮಿಸುವಂತೆ ಕೋರಿದರು.
READ | ಸರ್ಜಿ ಆಸ್ಪತ್ರೆಯ ಖ್ಯಾತ ಮಕ್ಕಳ ತಜ್ಞ ಡಾ.ಸತೀಶ್ ಇನ್ನಿಲ್ಲ
ಪ್ರತ್ಯೇಕ ಎರಡು ತಂಡಗಳ ರಚನೆ
ಶಿವಮೊಗ್ಗ ಜಿಲ್ಲಾ ಪುರುಷರ ಮತ್ತು ಮಹಿಳೆಯರ ಪ್ರತ್ಯೇಕ ತಂಡವನ್ನು ರಚನೆ ಮಾಡಲಾಗುತ್ತಿದೆ. ಇದಕ್ಕಾಗಿ ಆಯ್ಕೆ ಸಮಿತಿಯನ್ನು ರಚನೆ ಮಾಡಲಾಗಿದೆ. ಆಯ್ಕೆಗೆ ಯಾವುದೇ ವಯಸ್ಸಿನ ಮಿತಿ ಇಲ್ಲ. ಶಿವಮೊಗ್ಗ ಜಿಲ್ಲೆಯ ವಾಲಿಬಾಲ್ ಕ್ರೀಡಾಪಟುಗಳು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು. ಮೈಸೂರಿನಲ್ಲಿ ನಡೆಯಲಿರುವ ಅಂತರ ಜಿಲ್ಲಾ ವಾಲಿಬಾಲ್ ಪಂದ್ಯಾವಳಿ ನಂತರ ರಾಷ್ಟ್ರಮಟ್ಟದ ಪಂದ್ಯಾವಳಿಗೆ ರಾಜ್ಯ ತಂಡವನ್ನು ರಚನೆ ಮಾಡಲಾಗುವುದು ಎಂದು ತಿಳಿಸಿದರು.
ಮಾಹಿತಿಗಾಗಿ ಮೊಬೈಲ್ 9886629400, 9482235975ಗೆ ಸಂಪರ್ಕಿಸಬಹುದು. ಜಿಲ್ಲಾ ವಾಲಿಬಾಲ್ ಸಂಸ್ಥೆಯ ಅಧ್ಯಕ್ಷ ಜಯಪ್ರಕಾಶ್, ಗೋಪಾಲ್, ಸೋಮಣ್ಣ, ಸುನೀಲ್ ಮತ್ತಿತರರು ಇದ್ದರು.