Death News | ಸರ್ಜಿ ಆಸ್ಪತ್ರೆಯ ಖ್ಯಾತ ಮಕ್ಕಳ ತಜ್ಞ ಡಾ.ಸತೀಶ್‌ ಇನ್ನಿಲ್ಲ

Dr Satish Sarji Hospital

 

 

ಸುದ್ದಿ‌ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದ ಪ್ರತಿಷ್ಠಿತ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ತೀವ್ರ ನಿಗಾ ಘಟಕದ ತಜ್ಞ ವೈದ್ಯರು ಹಾಗೂ ಆಸ್ಪತ್ರೆಯ ಮೆಡಿಕಲ್‌ ಸೂಪರಿಂಟೆಂಡೆಂಟ್‌ ಆದ ಡಾ.ಸತೀಶ್‌ (46) ಅವರು ಅನಾರೋಗ್ಯದಿಂದ ಬುಧವಾರ ಬೆಳಗ್ಗೆ ನಿಧನ ಹೊಂದಿದರು.
ಮೃತರು ಪತ್ನಿ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸ್ತ್ರೀ ರೋಗ ಮತ್ತು ಪ್ರಸೂತಿ ತಜ್ಞೆ ಡಾ.ಚೇತನಾ, ಒಬ್ಬ ಪುತ್ರ, ಒಬ್ಬ ಪುತ್ರಿ ಅಪಾರ ಬಂಧು ಬಳಗ, ಸ್ನೇಹಬಳಗವನ್ನು ಅಗಲಿದ್ದಾರೆ.

READ | ಕುವೆಂಪು ವಿಶ್ವವಿದ್ಯಾಲಯ ಕುಲಸಚಿವ, ಹಣಕಾಸು‌‌ ಅಧಿಕಾರಿ ದಿಢೀರ್ ವರ್ಗಾವಣೆ

ಮೂಲತಃ ದಾವಣಗೆರೆ ಜಿಲ್ಲೆಯವರು
ಕಳೆದ ಏಳೆಂಟು ವರ್ಷಗಳಿಂದ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಮೂಲತಃ ದಾವಣಗೆರೆ ಜಿಲ್ಲೆಯ ತ್ಯಾವಣಗಿ ಗ್ರಾಮದವರು.
ಹಿತಮಿತ, ಮೃದು ಮಾತು, ಗಾಂಭೀರ್ಯ ಹಾಗೂ ಸರಳ, ಸಜ್ಜನಿಕೆಯೊಂದಿಗೆ ಅತ್ಯುತ್ತಮ ಚಿಕಿತ್ಸೆಯ ಮೂಲಕ ಮಲೆನಾಡಿನ ಮಾತಾಗಿದ್ದರು.
ಅಂತಿಮ ದರ್ಶನ ಮತ್ತು ಅಂತ್ಯಸಂಸ್ಕಾರ
ಗೋಪಾಳದ ರಂಗನಾಥ ಬಡಾವಣೆಯ ಮೊದಲ ತಿರುವಿನ ಶ್ರೀನಿಧಿ ಶಾಮಿಯಾನ ಪಕ್ಕದ ಸೌಪರ್ಣಿಕಾ ನಿಲಯದಲ್ಲಿ ಬೆಳಗ್ಗೆ 7 ರಿಂದ 9 ಗಂಟೆಯವರೆಗೆ ಮೃತರ ಪಾರ್ಥೀವ ಶರೀರದ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ 9 ರಿಂದ 9.30ರ ವರೆಗೆ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ದರ್ಶನಕ್ಕೆ ಅವಕಾಶ ಮಾಡಲಾಗಿತ್ತು. ಬಳಿಕ ಸ್ವಗ್ರಾಮವಾದ ದಾವಣಗೆರೆ ಜಿಲ್ಲೆಯ ತ್ಯಾವಣಗಿಗೆ ತೆರಳಿ, ಮಧ್ಯಾಹ್ನ 2 ಗಂಟೆಗೆ ಅಂತಿಮ ಸಂಸ್ಕಾರ ನಡೆಸಲಾಗುವುದು.

https://suddikanaja.com/2022/12/25/pm-narendra-modi-talk-on-shivamoggas-entrepreneur-in-mann-ki-baat/

error: Content is protected !!