ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 37 ವರ್ಷದ ಯುವಕನಿಗೆ 10 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ₹57,000 ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 6 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ ನ್ಯಾಯಾಲಯ ಆದೇಶ ನೀಡಲಾಗಿದೆ.
READ | ರಾಜಕೀಯ ಪ್ರವೇಶದ ಬಗ್ಗೆ ಸಿ.ಎಸ್.ಷಡಾಕ್ಷರಿ ಹೇಳಿದ್ದೇನು?
2019ನೇ ಸಾಲಿನಲ್ಲಿ 26 ವರ್ಷದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ನೊಂದ ಯುವತಿಯ ತಾಯಿ ನೀಡಿದ ದೂರಿನ ಮೇರೆಗೆ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆಗಿನ ತನಿಖಾಧಿಕಾರಿ ತೀರ್ಥಹಳ್ಳಿ ವೃತ್ತದ ಪಿಐ ಜಿ.ವಿ.ಗಣೇಶಪ್ಪ ತನಿಖೆ ಕೈಗೊಂಡು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಧೀಶ ಕೆ.ಎಸ್. ಮಾನು ಅವರು ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶಾಂತರಾಜ್ ವಾದ ಮಂಡಿಸಿದ್ದರು.