Siddeshwara swamiji | ಶಿವಮೊಗ್ಗದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಭಾವಪೂರ್ಣ ಶ್ರದ್ಧಾಂಜಲಿ

siddeshwara swamiji

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮಹಾನಗರ ಪಾಲಿಕೆ ವಿಪಕ್ಷ ನಾಯಕರ ಕಚೇರಿಯಲ್ಲಿ ಲಿಂಗೈಕ್ಯ ಜ್ಞಾನಯೋಗಾಶ್ರಮದ ಪೀಠಾಧೀಶ ಶ್ರೀ ಸಿದ್ದೇಶ್ವರ ಸ್ವಾಮೀಜಿ (Siddeshwara swamiji) ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.

READ | ಶಿವಮೊಗ್ಗದೆಲ್ಲೆಡೆ ಅದ್ಧೂರಿ ವೈಕುಂಠ ಏಕಾದಶಿ, ಯಾವ್ಯಾವ ದೇವಸ್ಥಾನಗಳಲ್ಲಿ ಏನೇನು ಅಲಂಕಾರ? ಏಕಾದಶಿ ಆಚರಣೆ ಉದ್ದೇಶವೇನು? 

ಈ ಸಂದರ್ಭದಲ್ಲಿ ಮಾತನಾಡಿದ ಮಹಾನಗರ ಪಾಲಿಕೆ ವಿಪಕ್ಷ ನಾಯಕಿ ರೇಖಾ ರಂಗನಾಥ್, ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಧಾರ್ಮಿಕ ಪ್ರವಚನದ ಮೂಲಕ ಸಮಾಜವನ್ನು ಸನ್ಮಾರ್ಗದಲ್ಲಿ ನಡೆಸುತ್ತಿದ್ದ ದಾರ್ಶನಿಕ ಗುರು. ಅವರ ಅಗಲಿಕೆ ವೈಯಕ್ತಿಕವಾಗಿ ಮತ್ತು ನಾಡಿಗೆ ತುಂಬಲಾರದ ನಷ್ಟ ಉಂಟು ಮಾಡಿದೆ. ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ದಿವ್ಯ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಮಠದ ಅನುಯಾಯಿಗಳಿಗೆ ಮತ್ತು ಭಕ್ತವೃಂದಕ್ಕೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ‌ ಎಂದರು.
ಮಹಾನಗರ ಪಾಲಿಕೆ ಸದಸ್ಯ ಎಚ್.ಸಿ.ಯೋಗೇಶ್, ಪ್ರಮುಖರಾದ ಎಚ್.ಪಿ.ಗಿರೀಶ್, ಬಿ.ಲೋಕೇಶ್, ಚಂದನ್, ವಿರೂಪಾಕ್ಷಪ್ಪ, ಸಿ.ಎಂ.ಚಿನ್ಮಯ್ ಇತರರು ಉಪಸ್ಥಿತರಿದ್ದರು.

https://suddikanaja.com/2023/01/02/date-fix-for-releasing-of-vaisampayana-theera-movie/

error: Content is protected !!