Bhadra dam | ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ನೀರು, ಎಚ್ಚರಿಕೆಯಿಂದಿರಲು ಸೂಚನೆ

Bhadra Dam

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ಜನವರಿ 27 ರಿಂದ ಫೆಬ್ರವರಿ 6ರ ವರೆಗೆ ಪ್ರತಿ ದಿನ 500 ಕ್ಯೂಸೆಕ್ಸ್ ನಂತೆ ಒಟ್ಟು 5,500 ಕ್ಯೂಸೆಕ್ಸ್ ನೀರನ್ನು ಹರಿಸಲಾಗುವುದು.

READ | ಶಿವಮೊಗ್ಗ ವಿಮಾನ ನಿಲ್ದಾಣ ಎಂಟ್ರಿ ನಿಷೇಧ, ಕಾರಣವೇನು?

ಈ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ ಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ.
ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್‍ ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಕರ್ನಾಟಕ ನೀರಾವರಿ ನಿಗಮದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.

error: Content is protected !!