ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಎಂ.ಆರ್.ಎಸ್ (MRS) 220 ಕೆ.ವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 110 ಕೆವಿ ಬೇ ಯ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾಚೇನಹಳ್ಳಿ (Machenahalli) 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿಎಫ್-1, ಎಂಸಿಎಫ್-2, ಎಂಸಿಎಫ್-3, ಎಂಸಿಎಫ್-4, ಎಂಸಿಎಫ್-17, ಎಂಸಿಎಫ್-18, ಎಂಸಿಎಫ್-20 ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಫೆ.6 ರ ಬೆಳಗ್ಗೆ 9.30 ರಿಂದ ಸಂಜೆ 5.30ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
READ | ಶಿಮುಲ್ ನಲ್ಲಿ ಭರ್ಜರಿ ಉದ್ಯೋಗ ಅವಕಾಶ, ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿಗ್ರಾಮ, ಹೊನ್ನವಿಲೆ, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೊನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್ಆರ್.ಪಿ ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.