Route Changed | ನಾಳೆ ಹರಕೆರೆ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧ, ಪರ್ಯಾಯ ಮಾರ್ಗದ ಮಾಹಿತಿ ಇಲ್ಲಿದೆ

DC Office

 

 

ಸುದ್ದಿ‌ ಕಣಜ.ಕಾಂ ಶಿವಮೊಗ್ಗ
SHIVAMOGGA: ಫೆ.18 ಮತ್ತು 19 ರಂದು ಶಿವಮೊಗ್ಗ ನಗರದಲ್ಲಿ ಹರಕೆರೆ ಗ್ರಾಮ(Harakere villege)ದಲ್ಲಿ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬ(Shivaratri festival)ದ ನಿಮಿತ್ತ ಜಾತ್ರೆ ನಡೆಯಲಿದ್ದು, ಫೆ.18 ರ ಬೆಳಗಿನ ಜಾವ 4 ರಿಂದ 19 ರ ಬೆಳಗಿನ ಜಾವದವರೆಗೆ ಒಂದು ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಬಂದು ಹೋಗುವ ಕಾರಣ ಜಿಲ್ಲಾಧಿಕಾರಿಗಳು ಈ ಕೆಳಗಿನಂತೆ ತಾತ್ಕಾಲಿಕವಾಗಿ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಲು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅಧಿಸೂಚನೆ ಹೊರಡಿಸಿದ್ದಾರೆ.

READ | ಕರ್ನಾಟಕ ಬಜೆಟ್’ನಲ್ಲಿ ಮಲೆನಾಡಿಗೆ ಭರ್ಜರಿ ಗಿಫ್ಟ್, ಶಿವಮೊಗ್ಗ, ಚಿಕ್ಕಮಗಳೂರಿಗೆ ಸಿಕ್ಕಿದ್ದೇನು?

ಪರ್ಯಾಯ ಮಾರ್ಗದ ವಿವರ

  • ತೀರ್ಥಹಳ್ಳಿ ಮಾರ್ಗವಾಗಿ ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಹೋಗುವ ವಾಹನಗಳು ಗಜಾನನ ಗೇಟ್ ಪಕ್ಕದ ರಸ್ತೆಯಲ್ಲಿ ಹೋಗಿ ರಾಮಿನಕೊಪ್ಪ ಚಾನಲ್ ಮಾರ್ಗವಾಗಿ ಎನ್‍ಎಚ್ ಆಸ್ಪತ್ರೆ ಪಕ್ಕದ ರಸ್ತೆಗೆ ಬಂದು ಸೇರುವುದು.
  • ತೀರ್ಥಹಳ್ಳಿಯಿಂದ ಬರುವ ಎಲ್ಲ ವಾಹನಗಳು ಎನ್‍ಎಚ್ ರಸ್ತೆಯ ಪಕ್ಕದ ರಸ್ತೆಯ ಮೂಲಕ ರಾಮಿನಕೊಪ್ಪ ಚಾನಲ್ ಕ್ರಾಸ್‍ನಿಂದ ಗಜಾನನ ಗೇಟ್ ಮೂಲಕ ಬಂದು ಶಿವಮೊಗ್ಗ ಸೇರುವುದು.

ಮೇಲ್ಕಂಡ ಮಾರ್ಗಗಳಲ್ಲಿ ಬದಲಾವಣೆಗಳು ಪೊಲೀಸ್ ವಾಹನಗಳು ಅತಿಗಣ್ಯ ವ್ಯಕ್ತಿಗಳ ವಾಹನಗಳು, ಆಂಬ್ಯುಲೆನ್ಸ್ ಹಾಗೂ ಮೂಲಸೌಕರ್ಯಗಳನ್ನು ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿರುತ್ತದೆ ಎಂದು ಅವರು ತಿಳಿಸಿದ್ದಾರೆ.

error: Content is protected !!