ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕರ್ನಾಟಕದ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು (Basavaraj Bommai) ಶುಕ್ರವಾರ ರಾಜ್ಯ ಬಜೆಟ್ ಮಂಡಿಸಿದರು. ಸಿಎಂ ಗದ್ದುಗೆ ಏರಿದ ಬಳಿಕ ಇದು ಅವರ ಎರಡನೇಯ ಬಜೆಟ್ ಆಗಿದೆ.
ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವಾಗ ಹಲವು ಜನಪ್ರಿಯ ಯೋಜನೆಗಳನ್ನು ಘೋಷಿಸಿದ್ದು, ಎಲ್ಲ ವರ್ಗದವರಿಗೆ ಆದ್ಯತೆ ನೀಡಲಾಗಿದೆ.
READ | ಶಿವಮೊಗ್ಗ ವಿಮಾನ ನಿಲ್ದಾಣ ನಾಮಕರಣ, ಕೇಂದ್ರಕ್ಕೆ ಈ ಹೆಸರು ಶಿಫಾರಸು ಮಾಡಿ
ಬಜೆಟ್ ಮುಖ್ಯಾಂಶಗಳು
- ಸಹಸ್ರ ಸರೋವರ ಕಾರ್ಯಕ್ರಮದಡಿ ರಾಜ್ಯದಲ್ಲಿ 1000 ಸಣ್ಣ ಸರೋವರಗಳನ್ನು ಅಭಿವೃದ್ಧಿಪಡಿಸುವುದು ಮತ್ತು ಸಹ್ಯಾದ್ರಿ ಸಿರಿ ಯೋಜನೆ ಅಡಿಯಲ್ಲಿ ಕರಾವಳಿ, ಮಲೆನಾಡು ಹಾಗೂ ಅರೆಮಲೆನಾಡು ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ನೀರು ಸಂರಕ್ಷಣೆಗಾಗಿ ಬಾವಿ, ಕಿಂಡಿ ಅಣೆ, ನಾಲಾ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಈ ಎರಡೂ ಯೋಜನೆಗಳಿಗೆ 75 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.
- * ತೋಟಗಾರಿಕೆ ಇಲಾಖೆಯಡಿಯಲ್ಲಿನ 12 ತೋಟಗಳಲ್ಲಿ ಒಂದು ತೋಟ ಒಂದು ಬೆಳೆ ಯೋಜನೆ ಅಡಿಯಲ್ಲಿ ಆಯಾ ಭಾಗದ ಕೃಷಿ, ಹವಾಮಾನ, ಮಣ್ಣಿನ ಗುಣಕ್ಕೆ ಅನುಗುಣವಾಗಿ ತೋಟಗಾರಿಕೆ ಉತ್ಪಾದಕತೆಯನ್ನು ಹೆಚ್ಚಿಸಲು 10 ಕೋಟಿ ರೂ. ಒಂದು ಬಾರಿಯ ವಿಶೇಷ ಅನುದಾನ ನೀಡಲಾಗುವುದು.
- ಅಡಿಕೆ ಬೆಳೆಯನ್ನು ಬಾಧಿಸುವ ರೋಗಗಳ ನಿರ್ವಹಣೆಗೆ ಬನೂತನ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸುವ ಜೊತೆಗೆ ಉತ್ಪಾದಕತೆ ಹೆಚ್ಚಿಸುವ ಅಗತ್ಯತೆ ಮನಗಂಡು ತೀರ್ಥಹಳ್ಳಿಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರಕ್ಕೆ 10 ಕೋಟಿ ನೆರವು.
- ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದರಂತೆ ಪ್ರತಿ ಶಾಲೆಗೆ 18 ಕೋಟಿ ರೂ. ವೆಚ್ಚದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆಯನ್ನು ಪ್ರಾರಂಭಿಸಲು ಕ್ರಮ ವಹಿಸಲಾಗುವುದು.
- ಪಶ್ಚಿಮಘಟ್ಟಗಳ ವ್ಯಾಪ್ತಿಯ ಜಿಲ್ಲೆಗಳಲ್ಲಿ ಮಳೆಗಾಲದಲ್ಲಿ ರಭಸದಿಂದ ಹರಿಯುವ ಹಳ್ಳ ತೊರೆಗಳನ್ನು ಸುರಕ್ಷಿತವಾಗಿ ದಾಟಲು ಹಾಗೂ ಸಂಪಕರಹಿತ ಜನ ವಸತಿ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸಲು 500 ಕಾಲು ಸಂಕಗಳ ನಿರ್ಮಾಣ ಕಾಮಗಾಅರಿಯನ್ನು 250 ಕೋಟಿ ರೂ. ಮೊತ್ತದಲ್ಲಿ ಕೈಗೆತ್ತಿಕೊಳ್ಳಲಾಗುವುದು.
- ಚಿಕ್ಕಮಗಳೂರು- ಬೇಲೂರು ರೈಲ್ವೆ ಮಾರ್ಗಗಳ ಮೂಲ ಅಂದಾಜು 2880 ಕೋಟ ರೂ.ಗಳಿದ್ದು ಕಳೆದ ವರ್ಷದಲ್ಲಿ ಇದನ್ನು 5838 ಕೋಟಿ ರೂಗಳೀಗೆ ಪರಿಷ್ಕರಿಸಿದ್ದು, ಇದಕ್ಕೆ 960 ಕೋಟಿ ರೂ. ಹೆಚ್ಚುವರಿ ಅನುದಾನವನ್ನು ರಾಜ್ಯ ಸರ್ಕಾರದ ವತಿಯಿಂದ ಒದಗಿಸಲಾಗುವುದು.
- ಶಿವಮೊಗ್ಗ, ವಿಜಯಪುರ, ಹಾಸನ, ರಾಯಚೂರು, ಕಾರವಾರ ವಿಮಾನ ನಿಲ್ದಾಣ ಕಾಮಗಾರಿ ಪ್ರಸಕ್ತ ಸಾಲಿನಲ್ಲೇ ಪೂರ್ಣಗೊಳಿಸಲಾಗುವುದು.
- ಶಿವಮೊಗ್ಗ ಲೋಕಸಭೆ ಕ್ಷೇತ್ರವಾದ ಬೈಂದೂರಿನಲ್ಲಿ ಪ್ರವಾಸೋದ್ಯಮಕ್ಕಾಗಿ ಮರೀನಾ ಅಭಿವೃದ್ಧಿಪಡಿಸಲಾಗುವುದು.
- ಶಿವಮೊಗ್ಗ- ಕೊಗರು- ಶಿಗ್ಲ ಸೇರಿದಂತೆ ರಾಜ್ಯದ ವಿವಿಧೆಡೆ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಲೈಟ್ ಕಾರ್ಗೋ ಟ್ರಾನ್ಸ್ ಪೋರ್ಟ್ ಬೋಟ್ ಸೇವೆಗಳನ್ನು ಪ್ರಾರಂಭಿಸಲಾಗುವುದು.
- ಚಿಕ್ಕಮಗಳೂರು ಸೇರಿ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ನೂತನ ಮೆಗಾ ಜವಳಿ ಪಾರ್ಕ್ ಮತ್ತು ರಾಜ್ಯದ 25 ಸ್ಥಳಗಳಲ್ಲಿ ಮಿನಿ ಜವಳಿ ಪಾರ್ಕ್ ಅನ್ನು ಪಿಪಿಪಿ ಮಾದರಿಯಲ್ಲಿ ಸ್ಥಾಪಿಸಿ, ಸುಮಾರು 25 ಸಾವಿರ ಜನರಿಗೆ ಉದ್ಯೋಗ ನೀಡುವ ಗುರಿ.
- ಚರ್ಮಗಂಟು ರೋಗವನ್ನು ತಡೆಗಟ್ಟಲು 1 ಕೋಟಿಗೂ ಹೆಚ್ಚು ಜಾನುವಾರುಗಳಿಗೆ ಲಸಿಕೆ ನೀಡಲಾಗಿದೆ. ಈ ಸೋಂಕಿನ ಮರಣ ಹೊಂದಿದ ರಾಸುಗಳ ಮಾಲೀಕರಿಗೆ 55 ಕೋಟಿ ರೂ. ಪರಿಹಾರ ಮಂಜೂರು ಮಾಡಲಾಗಿದೆ.
- ಈ ವರ್ಷದಲ್ಲಿ ಚಿಕ್ಕಮಗಳೂರಿನಲ್ಲಿ ಹೊಸ ವಿಶ್ವವಿದ್ಯಾಲಯವನ್ನು ತಂತ್ರಜ್ಞಾನದ ಗರಿಷ್ಠ ಬಳಕೆಯೊಂದಿಗೆ ಮತ್ತು ಕಡಿಮೆ ಮಾನವ ಸಂಪನ್ಮೂಲಗಳನ್ನು ಒಳಗೊಂಡಂತೆ ಸ್ಥಾಪಿಸಲಾಗುವುದು.
ರಾಜ್ಯಕ್ಕೇನು ಸಿಕ್ಕಿದ್ದು?
- ನಮ್ಮ ಜಿಲ್ಲೆ ನಮ್ಮ ಸಂಸ್ಕೃತಿ ಕಾರ್ಯಕ್ರಮದಡಿ ಪ್ರತಿ ಜಿಲ್ಲೆಯಲ್ಲಿ ಎಲ್ಲ ವರ್ಗದ ಸ್ಥಳೀಯ ಕಲಾವಿರದನ್ನು ಒಳಗೊಂಡಂತೆ ಜಾನಪದ ಹಬ್ಬ ಆಯೋಜನೆ
- ರಾಜ್ಯದಲ್ಲಿ ಮೀನಿನ ರಫ್ತು ಮತ್ತು ಮೌಲ್ಯವರ್ಧನೆಗಾಗಿ ಬೈಂದೂರು ತಾಲೂಕಿನ ಕಂಬದಕೋಣೆಯಲ್ಲಿ ಸೀಫುಡ್ ಪಾರ್ಕ್ ಅನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸುವುದು
- ರಾಜ್ಯದಲ್ಲಿ ಈಗಾಗಲೇ 19 ಲಕ್ಷ ಶಾಲಾ ಕಾಲೇಜು ವಿದ್ಯಾರ್ಥಿಗಳು ತಮ್ಮ ಶಿಕ್ಷಣಕ್ಕಾಗಿ ಸಾರ್ವಜನಿಕ ಬಸ್ ಸೇವೆಯನ್ನು ಅವಲಂಭಿಸಿದ್ದಾರೆ. ಇಂತಹ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ವರ್ಷದಲ್ಲಿ ಸಾರಿಗೆ ನಿಗಮಗಳ ಮೂಲಕ 100 ಕೋಟಿ ರೂ. ವೆಚ್ಷದಲ್ಲಿ 1000 ಹೊಸ ಕಾರ್ಯಾಚರಣೆಗಳನ್ನು ಮಾಡಲು ಮಕ್ಕಳ ಬಸ್ಸು ಯೋಜನೆ ಪ್ರಾರಂಭಿಸಲಾಗುವುದು. ಇದರಿಂದ ಹೆಚ್ಚುವರಿ 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.
- ರಾಜ್ಯದ ಸಂಘಟಿತ ವಲಯದಲ್ಲಿ ದುಡಿಯುವ ಹಿಮಳೆಯರಿಗೆ ಉಚಿತ ಬಸ್ ಪಾಸ್ ಸೌಲಭ್ಯ ಒದಗಿಸಲು ಉದ್ದೇಶಿಸಲಾಗಿದೆ. ರಾಜ್ಯದ ಒಟ್ಟು 30 ಲಕ್ಷ ಮಹಿಳೆಯರಿಗೆ ಸಹಾಯವಾಗುವ ಈ ಯೋಜನೆಗೆ 1000 ಕೋಟಿ ರೂ. ಒದಗಿಸಲಾಗುವುದು.
- ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 3.8 ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಅಡಿ 543 ಕೋಟಿ ರೂ. ಸಹಾಯ ಧನ, 2 ಲಕ್ಷ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ಸೌಲಭ್ಯ, 16,400 ಮಕ್ಕಳಿಗೆ ಕಲಿಕಾ ಉಪಕರಣಗಳ ವಿತರಣೆ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಬೆಳಗಾವಿ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ತಾತ್ಕಾಲಿಕ ವಸತಿ ಗೃಹ ಸೇರಿದಂತೆ ವಿವಿಧ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ ಸೌಲಭ್ಯಗಳಡಿ 23 ಲಕ್ಷ ಫಲಾನುಭವಿಗಳು ಮತ್ತು ಅವಲಂಭಿತರಿಗೆ ಒಟ್ಟು 1,785 ಕೋಟಿ ರೂ.ಗಳ ನೆರವು ನೀಡುವುದು.
- ಕರ್ನಾಟಕ ಸರ್ಕಾರವು ಈಗಾಗಲೇ ಶರಾವತಿ ಪಂಪ್ಡ್ ಸ್ಟೋರೇಜ್ ಪವರ್ ಪ್ಲ್ಯಾಂಟ್ (ಪಿಎಸ್ಪಿ) ವಿಸ್ತøತ ಯೋಜನೆ ವರದಿಯನ್ನು ತಯಾರಿಸಿದ್ದು, ಈ ಯೋಜನೆಯನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ 7,394 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕರ್ನಾಟಕ ವಿದ್ಯುತ್ ನಿಗಮದ ಮೂಲಕ ಅನುಷ್ಠಾನಗೊಳಿಸಲಾಗುವುದು. ಇದಲ್ಲದೇ 1000 ಎಂಡಬ್ಲ್ಯು ಹೊಸ ಪಂಪ್ಡ್ ಸ್ಟೋರೇಜ್ ಘಟಕವನ್ನು ಪಿಪಿಪಿ ಮಾದರಿಯ್ಲಲಿ ಸ್ಥಾಪಿಸಲಾಗುವುದು.
Auto | ಶಿವಮೊಗ್ಗದಲ್ಲಿ ಆಟೋಗಳಿಗೆ ಮತ್ತೊಂದು ಕಠಿಣ ರೂಲ್ಸ್ ಜಾರಿ, ಫೆ.28ರಿಂದ ಜಾರಿ, ಉಲ್ಲಂಘಿಸಿದರೆ ಕಠಿಣ ಕ್ರಮ