ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಶಿವಮೊಗ್ಗ ವಿಮಾನ ನಿಲ್ದಾಣ (Shivamogga airport) ಉದ್ಘಾಟನೆ ಕಾರ್ಯಕ್ರಮಕ್ಕೆ ಫೆ.27ರಂದು ಆಗಮಿಸಲಿದ್ದಾರೆ.
READ | ಶಿವಮೊಗ್ಗ ವಿಮಾನ ನಿಲ್ದಾಣ ಬಗ್ಗೆ ಮೋದಿ ಮಾಡಿದ ಟ್ವೀಟ್ ಸೃಷ್ಟಿಸಿದ ಸಂಚಲನ
ಅಂದು ಬೆಳಗ್ಗೆ 9ಕ್ಕೆ ದೆಹಲಿ (Delhi) ವಿಮಾನ ನಿಲ್ದಾಣದಿಂದ ಐಎಎಫ್ ಬಿಬಿಜೆ (AIF BBJ) ವಿಮಾನದ ಮೂಲಕ ಹೊರಡಲಿದ್ದಾರೆ. 11.35ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 11.40ಕ್ಕೆ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗದ ಮೂಲಕ ಆವರಣದಲ್ಲಿಯೇ ಇರುವ ಟರ್ಮಿನಲ್ ಬಿಲ್ಡಿಂಗ್ (Terminal Building)ಗೆ ಆಗಮಿಸುವರು. 11.45ರಿಂದ 11.55ರ ವರೆಗೆ ಟರ್ಮಿನಲ್ ಕಟ್ಟಡವನ್ನು ವೀಕ್ಷಿಸುವರು. ಅಲ್ಲಿಂದ ಹೊರಟು ಮಧ್ಯಾಹ್ನ 12 ಗಂಟೆಗೆ ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮ ನಡೆಯುವ ಜಾಗಕ್ಕೆ ಆಗಮಿಸಿ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 1.25ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಹೊರಟು ಬೆಳಗಾವಿಗೆ ತಲುವರು. ಅಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಜೆ 5.10ಕ್ಕೆ ಬೆಳಗಾವಿಯಿಂದ ಹೊರಟು 7.40ಕ್ಕೆ ದೆಹಲಿ ವಿಮಾನ ನಿಲ್ದಾಣಕ್ಕೆ ತಲುಪವರು.
ಶಿವಮೊಗ್ಗ ವಿಮಾನ ನಿಲ್ದಾಣದಿಂದ 5 ಸಾವಿರ ಉದ್ಯೋಗ ಸೃಷ್ಟಿ, ಇನ್ನೇನು ಅಭಿವೃದ್ಧಿ ಕಾರ್ಯಗಳಾಗುತ್ತಿವೆ ಗೊತ್ತಾ?