Shivamogga Court | 10 ವರ್ಷ ಕಠಿಣ ಜೈಲು, ₹40,000 ದಂಡ

Shivamogga Court

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: 25 ವರ್ಷದ ಯುವತಿಯ‌ ಮೇಲೆ ಲೈಂಗಿಕ‌ ದೌರ್ಜನ್ಯ ಎಸಗಿದ ಆರೋಪಿಗೆ 10 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ₹40,000 ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 6 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ ನ್ಯಾಯಾಲಯ ಆದೇಶಿಸಿದೆ.

READ | ಶಿವಮೊಗ್ಗ ವಿಮಾನಕ್ಕೆ ಭೇಟಿ ನೀಡಲಿದ್ದಾರೆ ಡಿಜಿಸಿಎ ಅಧಿಕಾರಿಗಳು, ಇದು ಅತೀ ಪ್ರಮುಖ ಭೇಟಿ ಏಕೆ?

ನೊಂದ ಯುವತಿಯ ತಂದೆಯು ನೀಡಿದ ದೂರಿನ ಮೇರೆಗೆ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ತೀರ್ಥಹಳ್ಳಿ ಪೊಲೀಸ್ ವೃತ್ತ ನಿರೀಕ್ಷಕ ಆಗಿನ ತನಿಖಾಧಿಕಾರಿ ಜಿ.ವಿ.ಗಣೇಶಪ್ಪ ಅವರು ಪ್ರಕರಣದ ತನಿಖೆ ಕೈಗೊಂಡು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು‌.
ಆರೋಪಿತನ ವಿರುದ್ಧ ಕಲಂ 376(ಎಲ್) ಐಪಿಸಿ ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಧೀಶ ಕೆ.ಎಸ್.ಮಾನು ತೀರ್ಪು ನೀಡಿದ್ದರು. ಸರ್ಕಾರಿ ಅಭಿಯೋಜಕ ಶಾಂತರಾಜ್ ವಾದ ಮಂಡಿಸಿದ್ದರು.

error: Content is protected !!