ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಪೊಲೀಸ್ ಇಲಾಖೆಯು ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ್ದು, ಹತ್ತು ಜನರನ್ನು ವಶಕ್ಕೆ ಪಡೆದ ಘಟನೆ ಸೋಮವಾರ ಸಂಜೆ ನಡೆದಿದೆ.
READ | ಶಿವಮೊಗ್ಗ ವಿಮಾನ ನಿಲ್ದಾಣ ಘೋಷಣೆ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ, ಜನಾಭಿಪ್ರಾಯ ಏನು?
ದೊಡ್ಡಪೇಟೆ ಪೊಲೀಸ್ ಠಾಣೆ ಪಿಐ ಹಾಗೂ ಸಿಬ್ಬಂದಿ ತಂಡವು ಹೊರವಲಯ ಮತ್ತು ಖಾಲಿ ಸ್ಥಳಗಳಲ್ಲಿ ಏರಿಯಾ ಡಾಮಿನೇಷನ್ (area Domination) ವಿಷೇಶ ಗಸ್ತು ಮಾಡಿ ಸಾರ್ವಜನಿಕ ಸ್ಥಳದಲ್ಲಿ ಜನರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ (Public Nuisance) ಮತ್ತು ಅನುಮಾನಸ್ಪಾದ 10 ಜನರನ್ನು ಪೊಲೀಸ್ ಠಾಣೆಗೆ ಕರೆತಂದು ಪೂರ್ವಪರಗಳನ್ನು ಪರಿಶೀಲಿಸಲಾಗಿದೆ. ಅದರಲ್ಲಿ Public Nuisance ಮಾಡಿದ ವ್ಯಕ್ತಿಗಳ ವಿರುದ್ದ 5 ಸಣ್ಣಪುಟ್ಟ ಪ್ರಕರಣಗಳನ್ನು (Petty Case) ದಾಖಲಿಸಲಾಗಿದೆ.