ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಹೊಳಲೂರಿನ (Holaluru) ಕೆನರಾ ಬ್ಯಾಂಕ್ (Canara bank) ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಟೈಲರಿಂಗ್ ಮತ್ತು ಡ್ರೆಸ್ ಡಿಸೈನ್ ಉಚಿತ ತರಬೇತಿ(tailoring and dress designing training)ಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತರು ಕೂಡಲೇ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ. 30 ದಿನಗಳ ಉಚಿತ ತರಬೇತಿ ಇದಾಗಿದ್ದು, ನಿರುದ್ಯೋಗಿ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
READ | 40,889 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ, ಎಸ್ಸೆಸ್ಸೆಲ್ಸಿ ಪಾಸ್ ಆದವರು ಅರ್ಜಿ ಸಲ್ಲಿಸಿ
ಹೊಂದಿರಬೇಕಾದ ಅರ್ಹತೆಗಳೇನು?
ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು. ಗ್ರಾಮೀಣ ಬಿ.ಪಿ.ಎಲ್ ಕಾರ್ಡ್ ಹೊಂದಿರಬೇಕು. 8ನೇ ತರಗತಿ ಉತ್ತೀರ್ಣರಾಗಿರಬೇಕು. ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿ ಯಾವಾಗಿಂದ ಆರಂಭ?
ತರಬೇತಿಯು ಮಾರ್ಚ್ 13ರಿಂದ ಪ್ರಾರಂಭವಾಗಲಿದ್ದು, ಆಸಕ್ತರು ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ವಿದ್ಯಾರ್ಹತೆ ಮತ್ತು ವಯಸ್ಸಿನ ವಿವರಗಳನ್ನು ಬರೆದು ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊನ್ನಾಳಿ ರಸ್ತೆ, ಹೊಳಲೂರು-577 216 (ಶಿವಮೊಗ್ಗ ತಾಲ್ಲೂಕು) ಈ ವಿಳಾಸಕ್ಕೆ ತಕ್ಷಣವೇ ಅರ್ಜಿ ಸಲ್ಲಿಸಿ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9743429595, 8660062683, 9449371579, 9481955721 ಅಥವಾ email –cbrsetiholalur@gmail.com ಸಂಪರ್ಕಿಸಿ.
https://suddikanaja.com/2023/02/02/shimul-recruitment-2023-application-invited-for-eligible-candidates/