ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ವಿವಿಯ ಕುಲಸಚಿವ ಪ್ರೊ. ಕೆ.ಎಲ್.ಎನ್.ಮೂರ್ತಿ ತಿಳಿಸಿದ್ದಾರೆ.
READ | ಶಿಮುಲ್’ನಲ್ಲಿ ಭರ್ಜರಿ ಉದ್ಯೋಗ ಅವಕಾಶ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?
ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ (ಜೆಆರ್ಎಫ್), ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಗೆ ಮತ್ತು ಕರ್ನಾಟಕ ಸರ್ಕಾರವು ನಡೆಸಲಿರುವ ರಾಜ್ಯಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.
ಆಸಕ್ತರು ಫೆ.15ರೊಳಗಾಗಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ 0821-2515944/9964760090 ಅನ್ನು ಸಂಪರ್ಕಿಸಬಹುದೆಂದು ತಿಳಿಸಿದ್ದಾರೆ.