ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮ (National Livestock Disease Control Programme) ಅಡಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜಾನುವಾರುಗಳಲ್ಲಿ ಕಂದು ರೋಗ ನಿಯಂತ್ರಣ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿರುತ್ತದೆ.
ಲಸಿಕಾ ಕಾರ್ಯಕ್ರಮದಡಿ 4 ರಿಂದ 8 ತಿಂಗಳ ಅರ್ಹ ಆಕಳು/ಎಮ್ಮೆಗಳ ಹೆಣ್ಣು ಕರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಿದ್ದು, ಫೆ.13 ರಿಂದ 28ರ ವರೆಗೆ ಸಾಮೂಹಿಕ ಲಸಿಕಾ (vaccination) ಕಾರ್ಯಕ್ರಮವನ್ನು ಕೈಗೊಳ್ಳಲಾಗುವುದು.
READ | ಡೆಹರಾಡೂನ್ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ನಲ್ಲಿ ಪ್ರವೇಶಕ್ಕೆ ಅವಕಾಶ, ಇಲ್ಲಿದೆ ಪೂರ್ಣ ವಿವರ
ಏನಿದು ಕಾಯಿಲೆ, ಯಾವ ಲಸಿಕೆ?
ಕಂದು ರೋಗವು ಪ್ರಾಣಿಜನ್ಯ ರೋಗವಾಗಿದ್ದು, ರಾಸುಗಳಲ್ಲಿ ಈ ರೋಗದಿಂದ ಗರ್ಭ ಧರಿಸಿದ ಹಸುಗಳು 6 ತಿಂಗಳ ನಂತರ ಕಂದು ಹಾಕಬಹುದು. ಅವುಗಳ ಗರ್ಭಸ್ರಾವದಿಂದ ಮತ್ತು ಹಸಿ ಹಾಲನ್ನು ಹಾಗೆಯೇ ಉಪಯೋಗಿಸುವುದರಿಂದ ರೋಗವು ಮನುಷ್ಯರಿಗೂ ಹರಡಬಹುದು. ಈ ರೋಗವು ಮನುಷ್ಯರಿಗೆ ಬಂದರೆ ಸಂತಾನೋತ್ಪತ್ತಿ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ. ಅರ್ಹ ಕರುಗಳಿಗೆ ಲಸಿಕೆ ಹಾಕಿಸಿ, ಸಂಭವಿಸಬಹುದಾದ ಆರ್ಥಿಕ ನಷ್ಟ ತಪ್ಪಿಸಿ ನಿಮ್ಮ ಜಾನುವಾರುಗಳನ್ನು ರಕ್ಷಿಸಿಕೊಳ್ಳಲು ಕೋರಿದೆ.
ಗ್ರಾಮವಾರು ವೇಳಾಪಟ್ಟಿ ಸಿದ್ಧ
ಲಸಿಕಾ ಕಾರ್ಯಕ್ರಮದ ವೇಳಾಪಟ್ಟಿಯನ್ನು ತಾಲ್ಲೂಕುವಾರು ಗ್ರಾಮವಾರು ತಯಾರಿಸಲಾಗಿದ್ದು, ಪಶುಪಾಲನಾ ಇಲಾಖೆಯ ಅಧಿಕಾರಿ/ ಸಿಬ್ಬಂದಿಯನ್ನೊಳಗೊಂಡ ಲಸಿಕಾ ತಂಡಗಳು ವೇಳಾಪಟ್ಟಿಯಂತೆ ಆಯಾ ಗ್ರಾಮಗಳಿಗೆ ಭೇಟಿ ನೀಡಿ ಜಾನುವಾರುಗಳಿಗೆ ಉಚಿತವಾಗಿ ಲಸಿಕೆಯನ್ನು ಹಾಕಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶು ಚಿಕಿತ್ಸಾ ಸಂಸ್ಥೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಶಿವಯೋಗಿ ಬಿ.ಯಲಿ ತಿಳಿಸಿದ್ದಾರೆ.