
ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ ಕೋವಿಡ್ ಪಾಸಿಟಿವ್ ಪ್ರಮಾಣದಲ್ಲಿ ಮತ್ತೆ ಏರಿಕೆಯಾಗಿದೆ. ರಾಜ್ಯದಲ್ಲಿ ಬುಧವಾರ ಒಟ್ಟು 119 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಇದುವರೆಗೆ ಒಟ್ಟು 518 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಎಲ್ಲಿ ಎಷ್ಟು ಪ್ರಕರಣಗಳು ಪತ್ತೆ?
ಬೆಂಗಳೂರು ನಗರ 78, ಶಿವಮೊಗ್ಗ 14, ಕಲಬುರಗಿಯಲ್ಲಿ 10 ಪ್ರಕರಣ ದೃಢಪಟ್ಟಿವೆ. ಬೆಂಗಳೂರಿನಲ್ಲಿ ಒಬ್ಬರು ಮೃತಪಟ್ಟಿದ್ದಾರೆ.