ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಮಾರ್ಚ್ ತಿಂಗಳ ಕೆಳಕಂಡ ದಿನಗಳಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು.
READ | ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತರ ಬಲೆಗೆ ಬಿದ್ದ ಅಧಿಕಾರಿ
ಯಾವ ದಿನಾಂಕದಂದು ಎಲ್ಲಿ ಲೋಕಾ ಸಭೆ?
- ಮಾ.9 ರಂದು ಹೊಸನಗರ ತಾಲೂಕು ಕಚೇರಿ ಸಭಾಂಗಣ
- ಮಾ.13 ರಂದು ಭದ್ರಾವತಿ ತಾಲೂಕು ಕಚೇರಿ ಸಭಾಂಗಣ
- ಮಾ.15 ರಂದು ಶಿವಮೊಗ್ಗ ಮಹಾನಗರ ಪಾಲಿಕೆ ಸಭಾಂಗಣ
- ಮಾ.18 ರಂದು ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ
- ಮಾ.21 ರಂದು ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ
- ಮಾ.28 ರಂದು ಸಾಗರ ತಾಲೂಕು ಕಚೇರಿ ಸಭಾಂಗಣ
- ಮಾ.30 ರಂದು ಸೊರಬ ತಾಲೂಕು ಕಚೇರಿ ಸಭಾಂಗಣ
ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ದಾರಿತನ, ನಿರ್ಲಕ್ಷ್ಯ, ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.