ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಎಂ.ಆರ್.ಎಸ್ (MRS) 110/11 ಕೆ.ವಿ ವಿದ್ಯುತ್ ಮಾರ್ಗಗಳಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಎಫ್-8 ಜಾವಳ್ಳಿ ಐ.ಪಿ ಫೀಡರ್ ನಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಮಾ.29 ರ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
READ | ನಾಳೆಯಿಂದ ಶಿವಮೊಗ್ಗದ ಹಲವೆಡೆ ಕರೆಂಟ್ ಇರಲ್ಲ, ಯಾವ್ಯಾವ ಪ್ರದೇಶಗಳಲ್ಲಿ ಪವರ್ ಕಟ್?
ಎಲ್ಲೆಲ್ಲಿ ಕರೆಂಟ್ ಇರಲ್ಲ
ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೋಬೆನವಳ್ಳಿ, ಬೀರನಹಳ್ಳಿ, ಹೊಯ್ಸನಹಳ್ಳಿ, ಅಬ್ಬರಘಟ್ಟ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿನ ನೀರಾವರಿ ಪಂಪ್ಸೆಟ್ಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ನಗರದ ಹಲವೆಡೆ ವ್ಯತ್ಯಯ
ಶಿವಮೊಗ್ಗ 110/11 ಕೆ.ವಿ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣ ಕಾಮಗಾರಿ ಹಮ್ಮಿಕೊಂಡಿರುವ ಕೆಳಕಂಡ ಪ್ರದೇಶಗಳಲ್ಲಿ ಮಾ.29 ರ ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಹೊಸಮನೆ, ಶರಾವತಿ ನಗರ, ಕುವೆಂಪು ರಸ್ತೆ, ಸಾಗರ ರಸ್ತೆ, ಆಯನೂರು ಗೇಟ್, ಜೈಲ್ ರಸ್ತೆ, ಚಾನಲ್ ಏರಿಯಾ, ದುರ್ಗಿಗುಡಿ, ಎ.ಆರ್.ಬಿ ಕಾಲೋನಿ, ಅಶೋಕನಗರ, ಪಂಪನಗರ, ರಂಗನಾಥ ಬಡಾವಣೆ, ಬಿ.ಎಸ್.ಎನ್.ಎಲ್ ಭವನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.