
ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮಾ.25 ರಂದು ರಾಜ್ಯಕ್ಕೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ (Narendra modi) ಅವರು ದಾವಣಗೆರೆ(davanagere) ಕಾರ್ಯಕ್ರಮ ಮುಗಿಸಿ ಶಿವಮೊಗ್ಗ ವಿಮಾನ ನಿಲ್ದಾಣ(shimoga airport) ಕ್ಕೆ ಆಗಮಿಸಲಿದ್ದಾರೆ. ಇಲ್ಲಿಂದ ದೆಹಲಿ(delhi)ಗೆ ಪ್ರಯಾಣ ಬೆಳೆಸಲಿದ್ದಾರೆ. ಇದು ವಿಮಾನ ನಿಲ್ದಾಣದ ಪ್ರಾಮುಖ್ಯತೆ ಸೂಚಿಸುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
READ | ಶಿವಮೊಗ್ಗದಿಂದ ವಿಮಾನ ಹಾರಾಟಕ್ಕೆ ಡೇಟ್ ಫಿಕ್ಸ್, ಯಾವಾಗಿಂದ ಸೇವೆ ಲಭ್ಯ, ಯಾವ ವಿಮಾನಯಾನದೊಂದಿಗೆ ಒಪ್ಪಂದ?
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧೆಡೆ ನಡೆಯುವ ಕಾರ್ಯಕ್ರಮಗಳಲ್ಲಿ ಮೋದಿವರು ಚಾಪರ್ ಮೂಲಕವೇ ಪಯಣಿಸಲಿದ್ದಾರೆ. ನಂತರ, ಶಿವಮೊಗ್ಗಕ್ಕೆ ಆಗಮಿಸಿ ಇಲ್ಲಿಂದ ದೆಹಲಿಗೆ ವಿಮಾನದ ಮೂಲಕ ತೆರಳುವರು.
ಶಾಸಕ ಕೆ.ಎಸ್.ಈಶ್ಚರಪ್ಪ ಮಾತನಾಡಿ, ದಾವಣಗೆರೆಯಲ್ಲಿ ಮಾ.25ರಂದು ಬಿಜೆಪಿ ಮಹಾ ಸಂಗಮ ಸಮಾವೇಶ ನಡೆಯಲಿದ್ದು, 10 ಲಕ್ಷಕ್ಕೂ ಅಧಿಕ ಜನ ಭಾಗವಹಿಸಲಿದ್ದು, ಪ್ರಧಾನಿ ಮೋದಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದರು.
ಬಿಜೆಪಿಯ ‘ವಿಜಯ ಸಂಕಲ್ಪ ಯಾತ್ರೆ’ ಸೇರಿದಂತೆ ಎಲ್ಲ ಸಂಘಟನಾತ್ಮಕ ಕಾರ್ಯಕ್ರಮಗಳಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ನಿರೀಕ್ಷೆಗೂ ಮೀರಿ ಜನ ಬೆಂಬಲಿಸಿದ್ದಾರೆ. ಪೂರ್ಣ ಬಹುಮತ ಪಡೆದು ಬಿಜೆಪಿ ಅಧಿಕಾರಕ್ಕೆ ಬರುವುದು ನಿಚ್ಚಳವಾಗಿದೆ ಎಂದು ತಿಳಿಸಿದರು.
ಎಲ್ಲೇ ನಿಂತರೂ ಸೋಲುವುದು ನಿಶ್ಚಿತ
ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ ಮತ್ತೆ ಟೀಕಾಪ್ರಹಾರ ನಡೆಸಿದ ಈಶ್ವರಪ್ಪ, ವಿಪಕ್ಷ ನಾಯಕರಾಗಿ ಇರುವರೆಗೂ ರಾಜ್ಯದಲ್ಲಿ ಎಲ್ಲೂ ಅವರಿಗೆ ಚುನಾವಣೆಗೆ ನಿಲ್ಲಲು ಜಾಗ ದೊರೆತಿಲ್ಲ. 224 ಕ್ಷೇತ್ರಗಳಲ್ಲೂ ನಿಂತರೂ ಸೋಲುವುದು ನಿಶ್ಚಿತ. ಕೋಲಾರ, ಬಾದಾಮಿ, ವರುಣಾ, ಕುಷ್ಟಗಿ ಎಲ್ಲ ಕ್ಷೇತ್ರ ಆಯ್ತು. ಈಗ ಮನೆಯವರನ್ನು ಕೇಳಿ ಹೇಳುತ್ತೇನೆ ಎನ್ನುತ್ತಿದ್ದಾರೆ. ಇನ್ನೊಂದೆಡೆ ಡಿಕೆಶಿ ಒಕ್ಕಲಿಗರು ಆಶೀರ್ವಾದ ಮಾಡಿದರೆ ನಾನೇ ಸಿಎಂ ಎನ್ನುತ್ತಿದ್ದಾರೆ. ಜಾತಿ ಲೆಕ್ಕಾಚಾರದಲ್ಲಿ ಮುಳುಗಿದ್ದಾರೆ ಎಂದು ಟೀಕಿಸಿದರು.
ಶಾಸಕ ಡಿ.ಎಸ್. ಅರುಣ್, ಸೂಡಾ ಅಧ್ಯಕ್ಷ ನಾಗರಾಜ್, ಬಿಜೆಪಿ ನಗರಾಧ್ಯಕ್ಷ ಜಗದೀಶ್, ಪ್ರಮುಖರಾದ ಕೆ.ಇ. ಕಾಂತೇಶ್, ಶಿವರಾಜ್, ಜ್ಞಾನೇಶ್ವರ್, ರಾಮಣ್ಣ, ಹೃಷಿಕೇಶ್ ಪೈ. ಇ. ವಿಶ್ವಾಸ್, ಅಣ್ಣಪ್ಪ ಉಪಸ್ಥಿತರಿದ್ದರು.