ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲೆಯಲ್ಲಿ ಮಾರ್ಚ್ 9 ರಿಂದ 29 ರವರೆಗೆ ಒಟ್ಟು 36 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು (PUC exams) ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಅಗತ್ಯವಾದ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ.
ಎಷ್ಟು ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ?
ಜಿಲ್ಲೆಯಲ್ಲಿ ಪರೀಕ್ಷೆಗೆ ಒಟ್ಟು 18,970 ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ. 16711 ರೆಗ್ಯುಲರ್ ವಿದ್ಯಾರ್ಥಿಗಳು, 1451 ರಿಪೀಟರ್ ಮತ್ತು 808 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಶಿವಮೊಗ್ಗ 13, ಭದ್ರಾವತಿ 06, ತೀರ್ಥಹಳ್ಳಿ 03, ಹೊಸನಗರ 03, ಸಾಗರ 05, ಶಿಕಾರಿಪುರ 04 ಮತ್ತು ಸೊರಬ 02 ಸೇರಿ ಒಟ್ಟು 18 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು.
ಪ್ರಶ್ನೆ ಪತ್ರಿಕೆ ಸಾಗಾಟಕ್ಕೆ ತ್ರಿಸದಸ್ಯ ಸಮಿತಿ ನೇಮಿಸಿ ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಸೂಕ್ತ ಬಂದೋಬಸ್ತ್ ನೀಡುವ ಬಗ್ಗೆ ಪೊಲೀಸ್ ಇಲಾಖೆಗೆ ಪತ್ರ ಬರೆಯಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀ. ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಮೂಲಸೌಕರ್ಯ ಕಲ್ಪಿಸಲಾಗಿದ್ದು, ಪರೀಕ್ಷೆ ಕರ್ತವ್ಯಕ್ಕೆ ಸಂಬಂಧಿಸಿದ ಮಾರ್ಗಾಧಿಕಾರಿಗಳು, ಪರಿವೀಕ್ಷಕರು ಹಾಗೂ ಇನ್ನಿತರೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
READ | ಕಳೆದ ಮೊಬೈಲ್ ಹುಡುಕಾಟಕ್ಕೆ ಶಿವಮೊಗ್ಗ ಪೊಲೀಸರ ಹೊಸ ಟೆಕ್ನಾಲಜಿ, ಏನಿದರ ಲಾಭ?
ಶುಭ ಕೋರಿದ ಗಣ್ಯರು | ಪಿಯುಸಿ ವಿದ್ಯಾರ್ಥಿಗಳಿಗೆ ಬೆಸ್ಟ್ ಆಫ್ ಲಕ್ ಹೇಳಿ ಗಣ್ಯರು ಟ್ವಿಟ್ ಮಾಡಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, “ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಆರಂಭವಾಗುತ್ತಿದ್ದು, ಎಲ್ಲಾ ವಿದ್ಯಾರ್ಥಿಗಳಿಗೂ ಶುಭವಾಗಲಿ ಎಂದು ಹಾರೈಸುತ್ತೇನೆ. ಎಲ್ಲರು ಯಾವುದೇ ಆತಂಕ ಅಂಜಿಕೆ ಇಲ್ಲದೆ ಪರೀಕ್ಷೆ ಬರೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತಾಗಲಿ” ಎಂದಿದ್ದಾರೆ.
ಶಿಕ್ಷಣ ಸಚಿವ ಬಿ.ಸಿ.ನಾಗೇಶ್, “ಮಾರ್ಚ್ 9 ರಿಂದ ರಾಜ್ಯದ 1,109 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಒಟ್ಟು 7,26,195 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಸುಸೂತ್ರವಾಗಿ ಪರೀಕ್ಷೆ ನಡೆಸಲು ಇಲಾಖೆಯಿಂದ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪರೀಕ್ಷೆ ಬರೆಯುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಶುಭಾಶಯಗಳು. “
ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, “ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲಾ ಮುದ್ದು ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಶುಭವಾಗಲಿ ಎಂದು ಹಾರೈಸುತ್ತೇನೆ”
ಇವರೊಂದಿಗೆ ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಸೇರಿದಂತೆ ಹಲವರು ಶುಭ ಕೋರಿದ್ದಾರೆ.
Holi celebration | ಶಿವಮೊಗ್ಗದಲ್ಲಿ ಡಿಜೆ ಸದ್ದಿಗೆ ಭರ್ಜರಿ ಸ್ಟೆಪ್ಸ್, ಯುವಕ, ಯುವತಿಯರಿಂದ ರೈನ್ ಡ್ಯಾನ್ಸ್