
ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮುಂಬರುವ ಕರ್ನಾಟಕ ರಾಜ್ಯ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ ನಾಕಾಬಂಧಿ (ಚೆಕ್ ಪೋಸ್ಟ್ ಗಳನ್ನು) ತೆರೆದು ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಈ ಕೆಳಕಂಡ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
READ | ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟಕ್ಕೆ ಡೇಟ್ ಫಿಕ್ಸ್
ಎಲ್ಲೆಲ್ಲಿ ಏನೇನು ಸೀಜ್?
- ಆಗುಂಬೆ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಸಾಗಿಸುತ್ತಿದ್ದ ಅಂದಾಜು ಮೌಲ್ಯ ₹29,70,000/- ರೂಗಳ ಒಟ್ಟು 1100 ಸಂಖ್ಯೆಯ ನಾನ್ ಸ್ಟಿಕ್ ದೋಸಾ ತವಾಗಳನ್ನು ವಶಪಡಿಸಿಕೊಳ್ಳಲಾಗಿದೆ.
- ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಸಾಗಿಸುತ್ತಿದ್ದ ಅಂದಾಜು ಮೌಲ್ಯ ₹8,00,000 ಮೌಲ್ಯದ ಒಟ್ಟು 30 ಟನ್ ತೂಕದ ಬೇಳೆ, ರವೆ, ಗೋಧಿ ಮತ್ತು ಇತರೆ ಆಹಾರ ಸಾಮಗ್ರಿಗಳು ತುಂಬಿದ್ದ 1,000 ಬ್ಯಾಗ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
- ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಸಾಗಿಸುತ್ತಿದ್ದ ಅಂದಾಜು ₹7,00,000 ಮೌಲ್ಯದ ಒಟ್ಟು 10 ಟನ್ 504 ಕೆಜಿ ತೂಕದ ಅಕ್ಕಿ ತುಂಬಿದ್ದ 404 ಚೀಲಗಳನ್ನು ವಶಪಡಿಸಿಕೊಳ್ಳಲಾಗಿದೆ.
- ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಸಂಗ್ರಹಿಸಿಟ್ಟಿದ್ದ ಅಂದಾಜು ₹10,00,000 ಮೌಲ್ಯದ ಬಟ್ಟೆ, ಸೀರೆ, ಇಡ್ಲಿ ಕುಕ್ಕರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇದರೊಂದಿಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ ಅಂದಾಜು ₹17,507 ಮೌಲ್ಯದ ಒಟ್ಟು 25 ಲೀಟರ್ 608 ಮಿಲಿ ಅಕ್ರಮ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿತರ ವಿರುದ್ಧ ಕರ್ನಾಟಕ ಅಬಕಾರಿ ಕಾಯ್ದೆಯಡಿಯಲ್ಲಿ ಒಟ್ಟು 8 ಪ್ರಕರಣಗಳನ್ನು ದಾಖಲಿಸಿ ಕಾನೂನು ರೀತಿ ಕ್ರಮಕೈಗೊಳ್ಳಲಾಗಿದೆ.
Shivamogga airport | ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮತ್ತೆ ಭೇಟಿ ನೀಡಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ