
ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲಾ ಪೊಲೀಸ್ ಇಲಾಖೆಯು ಹೋಳಿಯಂದು ಶಾಕ್ ನೀಡಿದೆ. ಇದಕ್ಕೆ ಕಾರಣ, ಸಾರ್ವಜನಿಕ ಸ್ಥಳಗಳಲ್ಲಿ ಜೋರಾಗಿ ಸದ್ದು ಮಾಡುತ್ತಾ ತೊಂದರೆ ನೀಡಿದ್ದು. ಇಂತಹ ಹತ್ತು ಬೈಕ್’ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

READ | ಆರು ವರ್ಷಗಳ ಹಿಂದಿನ ದಾಖಲೆ ಮುರಿದ ಶಿವಮೊಗ್ಗದ ಗೌತಮ ಗೌಡ, ಏನದು ದಾಖಲೆ?
ಪೊಲೀಸರ ಕಾರ್ಯಾಚರಣೆ
ಹೋಳಿ ಹಬ್ಬದ ಆಚರಣೆಯ ವೇಳೆ ಶಿವಮೊಗ್ಗ ನಗರದಲ್ಲಿ ಕೆಲವು ಯುವಕರು ತಮ್ಮ ದ್ವಿ ಚಕ್ರ ವಾಹನಗಳ ಸೈಲೆನ್ಸರ್ (bike silencer) ಪೈಪ್ ಗಳನ್ನು ಹೆಚ್ಚಿನ ಶಬ್ದ ಬರುವ ರೀತಿ ಮಾರ್ಪಡಿಸಿ, ಕರ್ಕಶ ಶಬ್ದ ಮಾಡಿಕೊಂಡು ಸಾರ್ವಜನಿಕರಿಗೆ ತೊಂದರೆಯಾಗುವ ರೀತಿ ನಗರದಲ್ಲಿ ಸಂಚರಿಸುತ್ತಿದ್ದರು. ಈ ಕಾರಣಕ್ಕೆ ಸಂಚಾರ ವೃತ್ತದ ಪಿಐ ಜಯಶ್ರೀ ಎಸ್.ಮಾನೆ ಅವರ ನೇತೃತ್ವದಲ್ಲಿ ಶಿವಮೊಗ್ಗ ಪೂರ್ವ ಸಂಚಾರ ಪೊಲೀಸ್ ಠಾಣೆ ಮತ್ತು ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ತಂಡವು ಕಾರ್ಯಾಚರಣೆ ನಡೆಸಿದೆ.
10 ಬೈಕ್’ಗಳು ವಶಕ್ಕೆ ಪಡೆದ ಪೊಲೀಸ್
ದೋಷಪೂರಿತ ಸೈಲೆನ್ಸರ್ ಗಳನ್ನು ಅಳವಡಿಸಿದ್ದ ಒಟ್ಟು 10 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದು, ಐಎಂವಿ ಕಾಯ್ದೆ ಅಡಿಯಲ್ಲಿ ದಂಡ ವಿಧಿಸಿ, ದೋಷಪೂರಿತ ಸೈಲೆನ್ಸರ್ ಪೈಪ್ ಗಳನ್ನು ವಶಕ್ಕೆ ಪಡೆದು ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.