SSLC Exams | ಆಲ್ ದ ಬೆಸ್ಟ್ ಸ್ಟೂಡೆಂಟ್ಸ್, ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ, ಹಾಜರಾಗಲಿದ್ದಾರೆ 23,372 ಮಕ್ಜಳು

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಜಿಲ್ಲೆಯ ಒಟ್ಟು 94 ಪರೀಕ್ಷಾ ಕೇಂದ್ರಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ನಡೆಯಲಿವೆ. ಇದಕ್ಕಾಗಿ ಸರ್ವ ಸಿದ್ಧತೆ ಪೂರ್ಣಗೊಂಡಿವೆ.

Click here for sslc exams time table

ಒಟ್ಟು 94 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಅದರಲ್ಲಿ 2 ಖಾಸಗಿ ಪರೀಕ್ಷಾ ಕೇಂದ್ರಗಳಿವೆ. ಒಟ್ಟು 23,372 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, 22,068 ರೆಗ್ಯೂಲರ್ ವಿದ್ಯಾರ್ಥಿಗಳು, 814 ಪುನರಾವರ್ತಿತ ವಿದ್ಯಾರ್ಥಿಗಳು, 357 ಖಾಸಗಿಯಾಗಿ ನೊಂದಾಯಿಸಿ ವಿದ್ಯಾರ್ಥಿಗಳು, 133 ಖಾಸಗಿ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದಾರೆ.

READ | ಶಿವಮೊಗ್ಗದ ಇಂದಿನ ಟಾಪ್‌ 11 ಸುದ್ದಿಗಳು ಇಲ್ಲಿವೆ

ಏನೆಲ್ಲ ತಯಾರಿ ಮಾಡಿಕೊಳ್ಳಲಾಗಿದೆ?

  1. 94 ಸ್ಥಾನಿಕ ಜಾಗೃತ ದಳದ ಅಧಿಕಾರಿಗಳು, 94 ಮುಖ್ಯ ಅಧೀಕ್ಷಕರು, 31 ಅನ್ಯ ಇಲಾಖಾ ಅಧಿಕಾರಿಗಳನ್ನು ವೀಕ್ಷಕರಾಗಿ ನೇಮಕ ಮಾಡಲಾಗಿದೆ.
  2. ಜಿಲ್ಲೆಯಲ್ಲಿ 33 ಮಾರ್ಗಗಳನ್ನು ರಚಿಸಲಾಗಿದ್ದು, 33 ಜನ ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
  3. ವಿದ್ಯಾರ್ಥಿಗಳ ಸಂಖ್ಯೆ 350 ಕ್ಕೂ ಹೆಚ್ಚು ಇರುವ ಕಡೆ ಉಪ ಮುಖ್ಯ ಅಧೀಕ್ಷಕರನ್ನು ನೇಮಕ ಮಾಡಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 11 ಉಪ ಮುಖ್ಯ ಅಧೀಕ್ಷಕರನ್ನು ನೇಮಕ ಮಾಡಲಾಗಿದೆ.
  4. ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಸಮರ್ಪಕ ಆಸನ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು‌ ಕಲ್ಪಿಸಲಾಗಿದೆ.
  5. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಅಳವಡಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ತೆರಳಲು ಬಸ್ಸಿನ ವ್ಯವಸ್ಥೆ ಮಾಡಲಾಗಿದೆ.
  6. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ನಿಷೇಧಾಜ್ಞೆ ಇರಲಿದೆ. ಪರೀಕ್ಷಾ ಕೇಂದ್ರಗಳ ಒಳಗೆ ಮೊಬೈಲ್ ಇನ್ನಿತರೆ ಎಲೆಕ್ಟ್ರಾನಿಕ್ ವಸ್ತುಗಳನ್ನು ನಿಷೇಧಿಸಲಾಗಿದೆ.

error: Content is protected !!