
ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ವಿವಿಧ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುತ್ತಿದ್ದ ಇಬ್ಬರನ್ನು ಗೂಂಡಾ ಕಾಯ್ದೆ ಅಡಿ ಒಂದು ವರ್ಷಗಳ ಕಾಲ ಇಡುವಂತೆ ಆದೇಶಿಸಲಾಗಿದೆ.
ಆಶ್ರಯ ಬಡಾವಣೆಯ ಶಮಂತ ಅಲಿಯಾಸ್ ಶಮಂತನಾಯ್ಕ(30) ಅವರನ್ನು ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಹಾಗೂ ಬೊಮ್ಮನಕಟೆಯ ಸಂದೀಪ್ ಅಲಿಯಾಸ್ ಸಂದೀಪ್ ಕುಮಾರ್ ನಾಯ್ಕ್(27)ಗೆ ಬಳ್ಳಾರಿ ಕೇಂದ್ರ ಕಾರಾಗೃಹ ಬಂಧನದಲ್ಲಿಡಲು ಆದೇಶಿಸಲಾಗಿದೆ.
READ | ಶಿವಮೊಗ್ಗದಲ್ಲಿ ಯುವ ಮತದಾರರ ಸೆಳೆಯಲು ಮಾಸ್ಟರ್ ಪ್ಲ್ಯಾನ್
ಗೂಂಡಾ ಕಾಯ್ದೆ ವಿಧಿಸಲು ಕಾರಣಗಳೇನು?
ಈ ಇಬ್ಬರು ಕೊಲೆ, ಕೊಲೆಗೆ ಯತ್ನ, ದರೋಡೆ, ಹಲ್ಲೆ, ದೊಂಬಿ, ಕೋಮು ಗಲಭೆ ಮತ್ತು ಗಾಂಜಾ ಮಾರಾಟದಂತಹ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ, ತಮ್ಮ ಸಹಚರರೊಂದಿಗೆ ಅಕ್ರಮ ಕೂಟ ಕಟ್ಟಿಕೊಂಡು, ಸಾರ್ವಜನಿಕರಿಗೆ ಬೆದರಿಕೆ ಹಾಕಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆಯನ್ನುಂಟು ಮಾಡುತ್ತಾ, ಜಾಮೀನು ಷರತ್ತುಗಳನ್ನು ಉಲ್ಲಂಘಿಸುವ ಕೃತ್ಯಗಳಿಂದ ಸಾರ್ವಜನಿಕ ಶಾಂತಿ ನೆಮ್ಮದಿಗೆ ಕಂಟಕ ಪ್ರಾಯರಾಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇವರು ಭಾಗಿಯಾಗಿರುವ ಅಪರಾಧ ಪ್ರಕರಣಗಳಲ್ಲಿ ಕಾನೂನು ಕ್ರಮ ಕೈಗೊಂಡಿರುವುದನ್ನು ಸಹ ಲೆಕ್ಕಿಸದೇ ಕಾನೂನು ಬಾಹಿರ ಚಟುವಟಿಕೆಗಳನ್ನು ಮುಂದುವರೆಸಿ ಕೊಂಡು ಬಂದಿರುತ್ತಾರೆ. ಸಾರ್ವಜನಿಕ ಸುವ್ಯಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಅವರನ್ನು ಗೂಂಡಾ ಕಾಯ್ದೆಯಡಿಯಲ್ಲಿ ಬಂಧನದಲ್ಲಿಡುವಂತೆ ಕೋರಿ ಪ್ರಸ್ತಾವನೆಯನ್ನು ಸಲ್ಲಿಸಿದ ಮೇರೆಗೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ನಂತರ ಫೆ.25ರಂದು ಗೂಂಡಾ ಕಾಯ್ದೆ ಅಧಿನಿಯಮದಡಿ ರಚಿತವಾದ ಸಲಹಾ ಮಂಡಳಿಯು ಶಮಂತ ಮತ್ತು ಸಂದೀಪ್ ಅವರನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿವೆ ಎಂದು ಅಭಿಪ್ರಾಯಪಟ್ಟು ವರದಿ ನೀಡಿದ ಮೇರೆಗೆ, ಫೆ.3ರಂದು ರಾಜ್ಯ ಸರ್ಕಾರವು ಜಿಲ್ಲಾಧಿಕಾರಿ ಅವರ ಆದೇಶವನ್ನು ಸ್ಥಿರೀಕರಿಸಿ ಇಬ್ಬರನ್ನೂ ಮಾ.3 ರಿಂದ 1 ವರ್ಷದ ಅವಧಿಯವರೆಗೆ ಗೂಂಡಾ ಕಾಯ್ದೆಯಡಿ ಬಂಧನದಲ್ಲಿಡಲು ಆದೇಶಿಸಿದೆ.
Dog Show | ಶ್ವಾನಗಳ ತುಂಟಾಟಕ್ಕೆ ಮಕ್ಕಳು ಫಿದಾ, ಒಂದೇ ಕಡೆ 30ಕ್ಕೂ ಹೆಚ್ಚು ಶ್ವಾನ ತಳಿಗಳ ದರ್ಶನ