Assembly election | ಶಿಕಾರಿಪುರ, ಸಾಗರದಲ್ಲಿ 21 ಕಾರ್ಯಕರ್ತರಿಗೆ 6 ವರ್ಷ ಗೇಟ್ ಪಾಸ್, ಕಾರಣವೇನು?

HS Sundresh congress

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲೆಯ ಸಾಗರ (sagar) ಮತ್ತು ಶಿಕಾರಿಪುರ(shikaripura)ದಲ್ಲಿ ಕಾಂಗ್ರೆಸ್ ವಿರುದ್ಧ ಪ್ರಚಾರ ಮಾಡುತ್ತಿದ್ದ ಪಕ್ಷದ 21 ಕಾರ್ಯಕರ್ತರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ (HS Sundresh) ತಿಳಿಸಿದರು.

READ | ಮನೆಯಿಂದಲೇ ಓಟ್’ಗೆ ಮೊದಲ ದಿನವೇ ಭರ್ಜರಿ‌ ರೆಸ್ಪಾನ್ಸ್, ಎಷ್ಟು ಮತದಾನವಾಗಿದೆ?

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ‌ ಅವರು, ಪ್ರಮುಖವಾಗಿ ಶಿಕಾರಿಪುರದ ಎಸ್.ಸಿ. ವೀರೇಶ್, ಉಮೇಶ್, ರಾಘವೇಂದ್ರ ನಾಯ್ಕ್ ಹಾಗೂ ಸಾಗರದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಡಾ. ರಾಜನಂದಿನಿ, ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ಹುನಗೋಡು ರತ್ನಾಕರ್  ಮುಂತಾದವರಿದ್ದಾರೆ. ಆದರೆ ಶಿಕಾರಿಪುರದಲ್ಲಿ ಸ್ವತಂತ್ರ ಅಭ್ಯರ್ಥಿ ನಾಗರಾಜ್ ಗೌಡರನ್ನು ಉಚ್ಛಾಟಿಸಲು ಈಗಾಗಲೇ ರಾಜ್ಯ ಸಮಿತಿಗೆ ಶಿಫಾರಸು ಮಾಡಲಾಗಿದೆ ಎಂದರು.
ಏಳೂ ಕ್ಷೇತ್ರಗಳಲ್ಲಿ ಜಯ ನಮ್ಮದೆ
ನಗರದಲ್ಲಿ ಕಾಂಗ್ರೆಸ್- ಬಿಜೆಪಿಗೂ ಗ್ರಾಮಾಂತರದಲ್ಲಿ ಕಾಂಗ್ರೆಸ್- ಜೆಡಿಎಸ್‌ಗೂ ನೇರ ಸ್ಪರ್ಧೆ ಇರುತ್ತದೆ. ಜಿಲ್ಲೆಯ ಎಲ್ಲ ಏಳು ಕ್ಷೇತ್ರಗಳಲ್ಲೂ ಜಯಭೇರಿ ಬಾರಿಸಲಿದೆ ಎಂದು ಹೇಳಿದರು.
ಕಾಂಗ್ರೆಸ್ ಅಭ್ಯರ್ಥಿಗಳು ಈಗಾಲೇ ಪ್ರಚಾರ ಮುಂದುವರಿಸಿದ್ದು, ಕಾಂಗ್ರೆಸ್ ಪರ ಅಲೆ ಕಾಣುತ್ತಿದೆ. ಪಕ್ಷ ಬಿಟ್ಟು ಹೋದವರಿದಂದ ಯಾವ ಪರಿಣಾಮವೂ ಆಗುವುದಿಲ್ಲ. ರಾಜ್ಯ ಮತ್ತು ಕೇಂದ್ರ ನಾಯಕರು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ. ಮೇ 2ರಂದು ರಾಹುಲ್ ಗಾಂಧಿ ತೀರ್ಥಹಳ್ಳಿಗೆ ಭೇಟಿ ನೀಡಲಿದ್ದಾರೆ ಎಂದರು.

Mallikarjun Kharge | ಖರ್ಗೆಯನ್ನು ತಂದೆ ಸ್ವರೂಪದಲ್ಲಿ ಕಾಣುತ್ತಿದ್ದೆ, ಹೀಗೇಕೆಂದರು ಈಶ್ವರಪ್ಪ?

error: Content is protected !!