ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು, ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಸೂಕ್ತ ದಾಖಲೆಗಳಿಲ್ಲದೇ ವಾಹನಗಳಲ್ಲಿ ಸಾಗಾಟ ಮಾಡುತ್ತಿದ್ದ, ಈ ಕೆಳಕಂಡ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಎಲ್ಲೆಲ್ಲಿ ಏನೇನು ಸೀಜ್?
- ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು ₹3,90,000 ಒಣ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ.
- ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು ₹31,000 26 ಗ್ಯಾಸ್ ಸ್ಟೌವ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
- ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು ₹3,80,000 ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.
- ಶಿಕಾರಿಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು ₹42,00,000 ಬಟ್ಟೆಗಳು ತುಂಬಿದ್ದ ಒಟ್ಟು 42 ಬ್ಯಾಗ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
- ಸಾಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು ₹9,00,000 ಫ್ಯಾನ್ ಮತ್ತು ಕಾಯ್ಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
BJP Join | ಕಾಗೋಡು ಪುತ್ರಿ ಡಾ.ರಾಜನಂದಿನಿ, ಕಟ್ಟಾ ಶಿಷ್ಯ ಹೊನಗೋಡು ಬಿಜೆಪಿ ಸೇರ್ಪಡೆ ಹಿಂದಿನ ಕಾರಣವೇನು?