ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮಹಾನಗರ ಪಾಲಿಕೆ (shimoga city corporation) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ (property tax) ಪಾವತಿಗೆ ಅನುಕೂಲವಾಗುವಂತೆ ಪಾಲಿಕೆ ಕಚೇರಿಯ ಆವರಣದಲ್ಲಿ ಅಗತ್ಯ ಕೌಂಟರ್ ಗಳನ್ನು ಪ್ರಾರಂಭ ಮಾಡಲಾಗಿದ್ದು, ಸಾರ್ವಜನಿಕರು ನೇರವಾಗಿ ಕಚೇರಿಯಲ್ಲಿ ಆಸ್ತಿ ತೆರಿಗೆ ಪಾವತಿಸಲು ಅವಕಾಶವಿರುತ್ತದೆ.
READ | ಚುನಾವಣೆ ಹಿನ್ನೆಲೆ ಸರ್ಕಾರಿ ನೌಕರರಿಗೆ ಡಿಸಿ ಮಹತ್ವದ ಸೂಚನೆ
ಅಲ್ಲದೇ ಈಗಾಗಲೇ ಜಾರಿಯಲ್ಲಿರುವಂತೆ ಆಸ್ತಿ ತೆರಿಗೆ ಪಾವತಿಯನ್ನು ಮಹಾನಗರ ಪಾಲಿಕೆಯ ವೆಬ್ಸೈಟ್ ವಿಳಾಸ www.shivamoggacitycorp.org ಮುಖಾಂತರ ಆನ್ಲೈನ್ನಲ್ಲಿ ಹಾಗೂ ಯುಪಿಐ ಮೊಬೈಲ್ ಆ್ಯಪ್ಗಳಾದ ಪೇಟಿಎಂ/ ಫೋನ್ ಪೇ/ ಗೂಗಲ್ ಪೇ/ ಇತರೆ ಮೂಲಕ ಆಸ್ತಿ ತೆರಿಗೆ ಪಾವತಿ ಮಾಡಬಹುದಾಗಿರುತ್ತದೆ.
ಸರ್ಕಾರದ ಸುತ್ತೋಲೆಯನ್ವಯ 2023-24ನೇ ಸಾಲಿಗೆ ಅನ್ವಯಿಸುವ ಆಸ್ತಿ ತೆರಿಗೆ ಮೇಲಿನ ಶೇ.5ರ ತೆರಿಗೆ ರಿಯಾಯಿತಿ ಸೌಲಭ್ಯದ ಕಾಲಾವಧಿಯನ್ನು ಜೂನ್ 30ರ ವರೆಗೆ ಅಲ್ಲದೇ ಜುಲೈ 1ರಿಂದ ಅನ್ವಯಿಸುವಂತೆ ವಿಳಂಬದ ಅವಧಿಗೆ ಮಾಸಿಕ ಶೇ.2 ರಷ್ಟು ದಂಡ ವಿಧಿಸಲಾಗುವುದು.
ಸಾರ್ವಜನಿಕರು ಜೂನ್ 30ರ ವರೆಗೆ ಶೇ.5 ರ ತೆರಿಗೆ ರಿಯಾಯಿತಿ ಸೌಲಭ್ಯವನ್ನು ಉಪಯೋಗಿಸಿಕೊಂಡು ಪಾವತಿಸಬಹುದು.
ಜನರ ಅನುಕೂಲಕ್ಕೆ ನೇರ ಪಾವತಿ
ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಕಚೇರಿಯ ರಾಜಸ್ವ ನಿರೀಕ್ಷಕರು ಹಾಗೂ ಕರ ವಸೂಲಿಗಾರರು ಕಚೇರಿಯಿಂದ ಅನುಮೋದಿತವಾಗಿರುವ ಇಡಿಸಿ(ಪಿಓಎಸ್) ಯಂತ್ರಗಳ ಮೂಲಕ ನೇರವಾಗಿ ಆಸ್ತಿ ಮಾಲೀಕರ ಸ್ವತ್ತಿನ ಸ್ಥಳದಲ್ಲಿ ಪಾವತಿಸಿಕೊಂಡು ರಸೀದಿಯನ್ನು ನೀಡುವ ಸೌಲಭ್ಯ ಸಹ ಕಲ್ಪಿಸಲಾಗಿದೆ. ಏಪ್ರಿಲ್ 2023ರ ಅವಧಿಯಲ್ಲಿ ತೆರಿಗೆ ಪಾವತಿಸಿ ಸಾರ್ವಜನಿಕರು ಶೇ.5ರ ತೆರಿಗೆ ರಿಯಾಯಿತಿ ಸೌಲಭ್ಯವನ್ನು ಪಡೆಯಲು ಹಾಗೂ ಆಸ್ತಿ ತೆರಿಗೆ ಪಾವತಿಸಿ ನಗರದ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸುವಂತೆ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.