Congress Candidate List | ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆ, ಶಿವಮೊಗ್ಗದ ಮೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹೆಸರು ಘೋಷಣೆ

congress 1

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕಾಂಗ್ರೆಸ್ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.
ಯಾವ ಕ್ಷೇತ್ರಕ್ಕೆ ಯಾರು?
ಶಿವಮೊಗ್ಗ ನಗರಕ್ಕೆ ಎಚ್.ಸಿ.ಯೋಗೇಶ್, ಶಿವಮೊಗ್ಗ ಗ್ರಾಮಾಂತರಕ್ಕೆ ಡಾ.ಶ್ರೀನಿವಾಸ್ ಕರಿಯಣ್ಣ, ಶಿಕಾರಿಪುರದಿಂದ ಜಿ.ಬಿ.ಮಾಲ್ತೇಶ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ.

congress candidates 3

READ | ಶಿವಮೊಗ್ಗದ 3 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ₹16.60 ಲಕ್ಷ ಮೌಲ್ಯದ ಮೊಬೈಲ್’ಗಳು ಸೀಜ್!

ಹೈಕಮಾಂಡ್ ಲೆಕ್ಕಾಚಾರ

  • ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಬಯಸಿ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಸೇರಿದಂತೆ ಒಟ್ಟು 11 ಜನರು ಅರ್ಜಿ ಹಾಕಿದ್ದರು. ಸಾಕಷ್ಟು ಚರ್ಚೆಗಳ ಬಳಿಕ ಅಂತಿಮವಾಗಿ ಜಾತಿ ಲೆಕ್ಕಾಚಾರದ ಆಧಾರದ ಮೇಲೆ ಮಹಾನಗರ ಪಾಲಿಕೆ ಸದಸ್ಯ ಎಚ್.ಸಿ.ಯೋಗೇಶ್ ಅವರಿಗೆ ಕಾಂಗ್ರೆಸ್ ಪಕ್ಷ ಮಣೆ ಹಾಕಿದೆ.
  • ಶಿಕಾರಿಪುರದಿಂದ ನಾಗರಾಜ್ ಗೌಡ, ಪುಷ್ಪಾ ಶಿವಕುಮಾರ್ ಸೇರಿದಂತೆ ಹಲವರು ಅರ್ಜಿ ಸಲ್ಲಿಸಿದ್ದರು. ಆದರೆ ಹೈಕಮಾಂಡ್ ಜಿ.ಬಿ.ಮಾಲ್ತೇಶ್ ಅವರಿಗೆ ಟಿಕೆಟ್ ನೀಡಿದೆ.
  • ಶಿವಮೊಗ್ಗ ಗ್ರಾಮಾಂತರ ಮೀಸಲು ಕ್ಷೇತ್ರಕ್ಕೆ ಘಟಾನುಘಟಿ ನಾಯಕರು ಟಿಕೆಟ್‍ಗಾಗಿ ಅರ್ಜಿ ಹಾಕಿದ್ದರು. ಅದರಲ್ಲಿ ಭೋವಿ ಸಮಾಜದ ಮುಖಂಡ ಎಸ್.ರವಿಕುಮಾರ್, ಮಹಿಳಾ ಕಾಂಗ್ರೆಸ್ ನಾಯಕಿ ಜಿ.ಪಲ್ಲವಿ, ವಿ.ನಾರಾಯಣಸ್ವಾಮಿ,ಬಲದೇವ ಕೃಷ್ಣ ಹೀಗೆ ಹಲವರು ಟಿಕೆಟ್ ನಿರೀಕ್ಷೆಯಲ್ಲಿದ್ದರು. ಅಂತಿಮವಾಗಿ ಡಾ.ಶ್ರೀನಿವಾಸ್ ಕರಿಯಣ್ಣ ಅವರಿಗೆ ಟಿಕೆಟ್ ಲಭಿಸಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಇದುವರೆಗೆ ಯಾರಿಗೆಲ್ಲ ಸಿಕ್ಕಿದದೆ ಟಿಕೆಟ್?
ಸೊರಬ ವಿಧಾನಸಭೆ ಕ್ಷೇತ್ರದಿಂದ ಮಧು ಬಂಗಾರಪ್ಪ, ಭದ್ರಾವತಿಯಿಂದ ಬಿ.ಕೆ.ಸಂಗಮೇಶ್ವರ್, ಸಾಗರದಿಂದ ಬೇಳೂರು ಗೋಪಾಲಕೃಷ್ಣ, ತೀರ್ಥಹಳ್ಳಿ ಕಿಮ್ಮನೆ ರತ್ನಾಕರ್ ಅವರಿಗೆ ಟಿಕೆಟ್ ನೀಡಿತ್ತು.

Arecanut rate | 15-04-2023 | ಚನ್ನಗಿರಿಯಲ್ಲಿ ರಾಶಿ ಅಡಿಕೆ ಧಾರಣೆಯಲ್ಲಿ ಏರಿಕೆ, ಇನ್ನುಳಿದೆಡೆ ಹೇಗಿದೆ ರೇಟ್?

error: Content is protected !!