ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ವಿಧಾನಸಭೆ ಚುನಾವಣೆ (Karnataka assembly election) ಹಿನ್ನೆಲೆಯಲ್ಲಿ ಚೆಕ್ ಪೋಸ್ಟ್(check post)ಗಳನ್ನು ತೆರೆದಿದ್ದು, ಅಲ್ಲಿ ಅನುಮಾನಾಸ್ಪದವಾಗಿರುವ ವಾಹನಗಳನ್ನು ಪರಿಶೀಲಿಸಲಾಗುತ್ತಿದೆ. ₹49ಕ್ಕಿಂತ ಹೆಚ್ಚು ಹಣವನ್ನು ಜನರು ಕ್ಯಾರಿ ಮಾಡುವಂತಿಲ್ಲ. ಹಾಗೊಮ್ಮೆ ತೆಗೆದುಕೊಂಡು ಹೋದರೆ ಅದಕ್ಕೆ ಪಕ್ಕಾ ದಾಖಲೆಗಳಿರಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ (Dr.R.Selvamani) ತಿಳಿಸಿದರು.
READ | ಶಿವಮೊಗ್ಗದಲ್ಲಿ ಎಲೆಕ್ಷನ್ ಹೈಅಲರ್ಟ್, ಜಿಲ್ಲೆಗೆ ಬರಲಿವೆ ಇನ್ನಷ್ಟು ಸೇನಾ ತುಕ್ಕಡಿ
ನಗರದ ಪತ್ರಿಕಾ ಭವನದಲ್ಲಿ ಟ್ರಸ್ಟ್ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ದಾಖಲೆಗಳಿಲ್ಲದೇ ಹಣ ತೆಗೆದುಕೊಂಡು ಹೋಗುವಾಗ ಚೆಕ್ ಪೋಸ್ಟ್ ನಲ್ಲಿ ಸಿಕ್ಕರೆ ಆ ಹಣವನ್ನು ಖಜಾನೆಯಲ್ಲಿ ಇಡಲಾಗುತ್ತದೆ. ಸೂಕ್ತ ದಾಖಲೆಗಳನ್ನು ತೋರಿಸಿ ಅದನ್ನು ಬಿಡಿಸಿಕೊಳ್ಳಬಹುದು ಎಂದರು.
ಈ ಬಾರಿ ಚುನಾವಣೆಯಲ್ಲಿ ಅತ್ಯಧಿಕ ಮತದಾನ ಆಗುವ ನಿಟ್ಟಿನಲ್ಲಿ ಎಲ್ಲ ಪ್ರಯತ್ನ ನಡೆಸಲಾಗಿದೆ. ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ ಶೇಕಡವಾರು ಮತದಾನ ಇನ್ನಷ್ಟು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಪ್ರಯತ್ನ ಸಾಗಿದೆ.
– ಸ್ನೇಹಲ್ ಎಸ್. ಲೋಖಂಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ
ಪಾರದರ್ಶಕ ಮತದಾನಕ್ಕೆ ಆದ್ಯತೆ
ಜಿಲ್ಲೆಯಲ್ಲಿ ಪಾರದರ್ಶಕವಾಗಿ ಮತದಾನ ನಡೆಯಲು ಸಿದ್ಧತೆ ಕೈಗೊಳ್ಳಲಾಗಿದೆ. ಒಂದುವೇಳೆ ಮಾದರಿ ನೀತಿಸಂಹಿತೆ ಉಲ್ಲಂಘನೆ ಕಂಡುಬಂದರೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಚುನಾವಣಾ ಆಯೋಗದ ನಿರ್ದೇಶನದಂತೆ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕಿದೆ. ಮಾದರಿ ನೀತಿ ಸಂಹಿತೆ ಪ್ರತಿಯೊಬ್ಬರಿಗೂ ಅನ್ವಯ ಆಗಲಿದ್ದು, ಯಾರೂ ಕೂಡ ಉಲ್ಲಂಘನೆ ಮಾಡಬಾರದು ಎಂದರು.
ಅಭ್ಯರ್ಥಿಗಳ ಖರ್ಚಿನ ಮಿತಿ
ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ₹40 ಲಕ್ಷದವರೆಗೂ ಖರ್ಚು ಮಾಡುವುದಕ್ಕೆ ಅವಕಾಶವಿದೆ. ಖರ್ಚು ವೆಚ್ಚದ ಸಂಪೂರ್ಣ ಮಾಹಿತಿ ನೀಡಬೇಕು. ಇದಕ್ಕಾಗಿ ವೀಕ್ಷಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ನಿಗದಿಪಡಿಸಿದ್ದಕ್ಕಿಂತ ಹೆಚ್ಚಿನ ಖರ್ಚು ಮಾಡುವುದು ಕಂಡುಬಂದರೆ ಚುನಾವಣಾ ಆಯೋಗದ ನಿರ್ದೇಶನದಂತೆ ಸೂಕ್ತ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ಕುಮಾರ್ ಮಾತನಾಡಿದರು. ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್, ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್ ಎಸ್. ಯಡಗೆರೆ, ನಾಗರಾಜ ನೇರಿಗೆ, ಹೊನ್ನಾಳಿ ಚಂದ್ರಶೇಖರ್ ಉಪಸ್ಥಿತರಿದ್ದರು.