ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮತದಾರರ ಹೆಸರು ಸೇರ್ಪಡೆಗೆ (voter list) ಅರ್ಜಿ ಸಲ್ಲಿಸಲು ಏಪ್ರಿಲ್ 11 ಅಂತಿಮ ದಿನವಾಗಿದ್ದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಎಚ್.ಎನ್.ಚಂದ್ರಕುಮಾರ್ ತಿಳಿಸಿದರು.
READ | ಚುನಾವಣೆ ಹಿನ್ನೆಲೆ ಸರ್ಕಾರಿ ನೌಕರರಿಗೆ ಡಿಸಿ ಮಹತ್ವದ ಸೂಚನೆ
ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು.
2022ರ ಜನವರಿ 5ರ ಅಂತಿಮ ಮತದಾರರ ಪಟ್ಟಿ ಪ್ರಕಟವಾದ ನಂತರದಲ್ಲಿ ಹೊಸದಾಗಿ ಸೇರ್ಪಡೆಯಾದ ಮತದಾರರಿಗೆ ಗುರುತಿನ ಚೀಟಿಯನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಇದುವರೆಗೆ ಸುಮಾರು 10,090 ಮತದಾರರ ಗುರುತಿನ ಚೀಟಿಗಳನ್ನು ಸ್ಪೀಡ್ ಪೊಸ್ಟ್ ಮೂಲಕ ಮತದಾರರಿಗೆ ರವಾನಿಸಿದೆ ಎಂದರು.
ಭಾರತೀಯ ಜನತಾ ಪಾರ್ಟಿ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದವರು ಮತಗಟ್ಟೆ ಏಜೆಂಟರುಗಳ ಪಟ್ಟಿಯನ್ನು ನೀಡಿದ್ದಾರೆ. ಜನತಾದಳ ಜಾತ್ಯಾತೀತ ಪಕ್ಷದವರು ಮತಗಟ್ಟೆ ಏಜೆಂಟರುಗಳ ಪಟ್ಟಿಯನ್ನು ನೀಡಬೇಕಾಗಿದೆ ಎಂದು ತಿಳಿಸಿದರು.
ಪಾಲಿಕೆ ಗೇಟ್ ಕ್ಲೋಸ್
ಡಿವೈಎಸ್ಪಿ ಬಾಲರಾಜ್ ಮಾತನಾಡಿ, ನಾಮಪತ್ರ ಸಲ್ಲಿಕೆ ಆರಂಭ ದಿನಾಂಕದಿಂದ ಅಂತಿಮ ದಿನದವರೆಗೆ ಪಾಲಿಕೆ ಹಿಂದಿನ ಗೇಟ್ನ್ನು ಸಾರ್ವಜನಿಕರ ಪ್ರವೇಶಕ್ಕೆ ನಿಷೇಧಿಸಲಾಗುವುದು, ಪಾಲಿಕೆಯ ಇನ್ನೊಂದು ಗೇಟ್ನಿಂದ ಪ್ರವೇಶಿಸಿ ತಮ್ಮ ಕೆಲಸಗಳನ್ನು ಮಾಡಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.
ಐಎಎಸ್ ಪ್ರೊಬೇಷನರಿ ಅಧಿಕಾರಿ ದಲ್ಜೀತ್ ಕುಮಾರ್ ಇದ್ದರು.
Theft case | ಮನೆಗೆ ಕನ್ನ ಹಾಕಿದ್ದ ಮಹಿಳೆ ಅರೆಸ್ಟ್, ಅವಳ ಬಳಿ ಸಿಕ್ಕಿದ್ದೇನು?