Power cut | ಶಿವಮೊಗ್ಗದ ಹಲವು ಪ್ರದೇಶಗಳಲ್ಲಿ ನಾಳೆ ಕರೆಂಟ್ ಕಟ್, ಕಾರಣವೇನು?

POWER CUT 1

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಮಾಚೇನಹಳ್ಳಿ (MA
achenahalli) 110/11 ಕೆವಿ ವಿದ್ಯುತ್‌ ವಿತರಣಾ ಕೇಂದ್ರದ ಎಫ್‌-3 ಮತ್ತು ಎಫ್-20 ಮಾರ್ಗಗಳಲ್ಲಿ ನಿರ್ವಹಣ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಈ ಮಾರ್ಗದಿಂದ ವಿದ್ಯುತ್‌ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಏ.26 ರ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

READ | ಶಿವಮೊಗ್ಗ ಕೇಂದ್ರ ಕಾರಾಗೃಹ ಮೇಲೆ ಪೊಲೀಸರ ದಿಢೀರ್ ದಾಳಿ, ಕಾರಣವೇನು?

ಎಲ್ಲೆಲ್ಲಿ ಪವರ್ ಕಟ್?
ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ಧರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್‌, ಹೊಸೂರು ರೆಡ್ಡಿಕ್ಯಾಂಪ್‌, ದುಮ್ಮಳ್ಳಿ, ಶುಗರ್‌ ಕಾಲೋನಿ ಮತ್ತು ಜಯಂತಿಗ್ರಾಮ, ಕಿಯೊನಿಕ್ಸ್‌ ಐಟಿ ಪಾರ್ಕ್‌, ಮಲ್ನಾಡ್‌ ಆಸ್ಪತ್ರೆ, ಕೆ.ಎಸ್‌.ಆರ್.ಪಿ ಕಾಲೋನಿ, ನವುಲೆ, ಬಸವಾಪುರ, ಹಾತಿಕಟ್ಟೆ ಹೊನ್ನವಿಲೆ, ಅಮರಾವತಿ ಕ್ಯಾಂಪ್‌, ಶೆಟ್ಟಿಹಳ್ಳಿ, ಹಳೇಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಮಾಳೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ (MESCOM) ತಿಳಿಸಿದೆ.

Today Arecanut Rate | ಚನ್ನಗಿರಿ, ಯಲ್ಲಾಪುರ, ಸಿರಸಿಯಲ್ಲಿ ಅಡಿಕೆ ಬೆಲೆ ಹೆಚ್ಚಳ, ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ರೇಟ್?

error: Content is protected !!