Assembly election | ದಾಖಲೆ ಇಲ್ಲದೇ ಸಾಗಿಸುತ್ತಿದ್ದ‌ ಮೂಟೆಗಟ್ಟಲೇ ಅಕ್ಕಿ, ಗ್ಯಾಸ್ ಸ್ಟೌಗಳ‌ ರಾಶಿ ಸೀಜ್

raid election

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ (Karnataka state assembly election) ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು, ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಸೂಕ್ತ ದಾಖಲೆಗಳಿಲ್ಲದೇ ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ಈ ಕೆಳಕಂಡ ವಸ್ತುಗಳನ್ನು ಮಂಗಳವಾರ ವಶಪಡಿಸಿಕೊಳ್ಳಲಾಗಿದೆ.

READ | ಫುಡ್ ಕೋರ್ಟ್ ಬಳಿ‌ ಸುಸ್ತಾಗಿ ಬಿದ್ದಿದ್ದ ವ್ಯಕ್ತಿ‌ ಸಾವು

ಎಲ್ಲಿ‌ ಎಷ್ಟು ಸಾಮಗ್ರಿಗಳು‌ ಸೀಜ್?

  • ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ಅಂದಾಜು ಮೌಲ್ಯ ₹7,00,000 ಗಳ ಒಟ್ಟು 460 ಚೀಲಗಳಲ್ಲಿ ತುಂಬಿದ್ದ 119 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.
  • ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಗೇಜ್ ವಾಹನದಲ್ಲಿ ಸಾಗಿಸುತ್ತಿದ್ದ ₹1,40,000 ಮೌಲ್ಯದ ಒಟ್ಟು 50 ಗ್ಯಾಸ್ ಸ್ಟೌಗಳನ್ನು ವಶಪಡಿಸಿಕೊಳ್ಳಲಾಗಿದೆ.
  • ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ₹95,890 ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.

error: Content is protected !!