Police raid | ಚೆಕ್ ಪೋಸ್ಟ್’ನಲ್ಲಿ ಲಕ್ಷಾಂತರ ಮೌಲ್ಯದ ದಿನಸಿ‌ ಬ್ಯಾಗ್, ರಗ್ಗು, ಜಮಖಾನಾ ಸೀಜ್

Raid in shivamogga

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲೆಯ ವಿವಿಧ ಚೆಕ್ ಪೋಸ್ಟ್’ಗಳಲ್ಲಿ ಪರಿಶೀಲನೆಯ ವೇಳೆ ದಾಖಲೆರಹಿತವಾಗಿ ಸಾಗಿಸುತ್ತಿದ್ದ ಲಕ್ಷಾಂತರ ಮೌಲ್ಯದ ನಗದು, ದಿನಸಿ ಪದಾರ್ಥ, ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ. ವಿವಿಧ ಠಾ ವ್ಯಾಪ್ತಿಯಲ್ಲಿ ಪ್ರಕರಣಗಳು ದಾಖಲಾಗಿವೆ.

READ | ₹4.50 ಕೋಟಿ ಮೌಲ್ಯದ ಸೀರೆ, ₹1.40 ಕೋಟಿ ನಗದು ಸೇರಿ ಸಾಮಗ್ರಿಗಳು ಸೀಜ್ 

ಯಾವ ಠಾಣೆ ವ್ಯಾಪ್ತಿಯಲ್ಲಿ ಎಷ್ಟು ಸೀಜ್?

  • ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಅನಧಿಕೃತವಾಗಿ ಸಂಗ್ರಹಿಸಿಟ್ಟಿದ್ದ ಅಂದಾಜು ಮೌಲ್ಯ ₹10,00,000 ಗಳ ಅಕ್ಕಿ, ಬೇಳೆ, ಎಣ್ಣೆ, ಶಾವಿಗೆ, ಸಕ್ಕರೆ ಮತ್ತು ಇತರೆ ವಸ್ತುಗಳಿದ್ದ 500 ಬ್ಯಾಗ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
  • ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಸಾಗಿಸುತ್ತಿದ್ದ ಅಂದಾಜು ಮೌಲ್ಯ ₹5,00,000 ಗಳ 115 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.
  • ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ 3 ಲಗೇಜ್ ವಾಹನಗಳಲ್ಲಿ ಸಾಗಿಸುತ್ತಿದ್ದ ಅಂದಾಜು ಮೌಲ್ಯ ₹4,50,000 ಗಳ ರಗ್ಗು ಮತ್ತು ಜಮಖಾನಗಳನ್ನು ವಶಪಡಿಸಿಕೊಳ್ಳಲಾಗಿದೆ.
  • ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಿಸುತ್ತಿದ್ದ ₹90,000 ‌ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.

Balebare ghat | ಬಾಳೆಬರೆ ಘಾಟಿಯಲ್ಲಿ ಸಂಚಾರ ನಿಷೇಧ ಮುಂದುವರಿಕೆ, ಎಲ್ಲಿವರೆಗೆ ಕಾಮಗಾರಿ?

error: Content is protected !!