Police raid on Jail | ಶಿವಮೊಗ್ಗ ಕೇಂದ್ರ ಕಾರಾಗೃಹ ಮೇಲೆ ಪೊಲೀಸರ ದಿಢೀರ್ ದಾಳಿ, ಕಾರಣವೇನು?

Jail

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೋಮವಾರ ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದಲ್ಲಿ ದಿಢೀರ್ ದಾಳಿ ನಡೆಸಲಾಯಿತು.

READ | ಶಿವಮೊಗ್ಗ ವಿಧಾನಸಭೆ ಚುನಾವಣೆ, ಯಾವ ಕ್ಷೇತ್ರದಲ್ಲಿ ಎಷ್ಟು ಜನ ಕಣದಲ್ಲಿದ್ದಾರೆ? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರಡ್ಡಿ, ಶಿವಮೊಗ್ಗ ಎ ಉಪ ವಿಭಾಗದ ಡಿವೈಎಸ್.ಪಿ ಬಾಲರಾಜ್, ತುಂಗಾನಗರ ಠಾಣೆ ಪೊಲೀಸ್ ನಿರೀಕ್ಷಕ ಮಂಜುನಾಥ್, ದೊಡ್ಡಪೇಟೆ ಠಾಣೆ ಪೊಲೀಸ್ ನಿರೀಕ್ಷಕ ಅಂಜನ್ ಕುಮಾರ್, ಜಯನಗರ ಠಾಣೆಯ ಪೊಲೀಸ್ ನಿರೀಕ್ಷಕ ಗಜೇಂದ್ರಪ್ಪ, ಶಿವಮೊಗ್ಗ ಸಂಚಾರ ವೃತ್ತ ಸಿಪಿಐ ಜಯಶ್ರೀ ಮಾನೆ, ವಿನೋಬನಗರ ಠಾಣೆಯ ಪೊಲೀಸ್ ನಿರೀಕ್ಷಕ ಸಂಜೀವ್ ಮಹಾಜನ್ ಹಾಗೂ 5 ಜನ ಪಿಎಸ್.ಐ ಮತ್ತು 50 ಜನ ಪೊಲೀಸ್ ಸಿಬ್ಬಂದಿ ತಂಡವು ಸೋಗಾನೆಯ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿರುತ್ತಾರೆ.

Police raid | ಶಿವಮೊಗ್ಗದಲ್ಲಿ ರಾತ್ರಿ ಕಾರ್ಯಾಚರಣೆ, 10 ಜನರು ಪೊಲೀಸರ ವಶಕ್ಕೆ, ಕಾರಣವೇನು?

error: Content is protected !!