Assembly election | ₹4.50 ಕೋಟಿ ಮೌಲ್ಯದ ಸೀರೆ, ₹1.40 ಕೋಟಿ ಸೇರಿ ಲಕ್ಷಾಂತರ ಹಣ ಸೀಜ್ ಮಾಡಿದ ಪೊಲೀಸ್

check post Assembly election

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ (check post) ಗಳನ್ನು ತೆರೆದು, ವಾಹನಗಳ ತಪಾಸಣೆಯನ್ನು ನಡೆಸಲಾಗುತ್ತಿದೆ. ಸೂಕ್ತ ದಾಖಲೆ(records)ಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಮತ್ತು ಅನಧಿಕೃತವಾಗಿ ಸಂಗ್ರಹಿಸಿಟ್ಟಿದ್ದ ಈ ಕೆಳಕಂಡ ವಸ್ತುಗಳು ಮತ್ತು ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.

READ | ಬಾಳೆಬರೆ ಘಾಟಿಯಲ್ಲಿ ಸಂಚಾರ ನಿಷೇಧ ಮುಂದುವರಿಕೆ, ಎಲ್ಲಿವರೆಗೆ ಕಾಮಗಾರಿ?

ಎಲ್ಲಿ ಏನೇನು ವಶ?

  • ದೊಡ್ಡಪೇಟೆ ಪೊಲೀಸ್ ಠಾಣೆ (Doddapete Police station) ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಅನಧಿಕೃತವಾಗಿ ಸಂಗ್ರಹಿಸಿ ಇಟ್ಟಿದ್ದ ಅಂದಾಜು ₹4.50 ಕೋಟಿ ಮೌಲ್ಯದ ಸೀರೆಗಳನ್ನು ವಶಪಡಿಸಿಕೊಳ್ಳಲಾಗಿದೆ.
  • ತುಂಗಾನಗರ ಪೊಲೀಸ್ ಠಾಣೆ (Tunga nagar police station) ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಬುಲೆರೋ ವಾಹನದಲ್ಲಿ ಸಾಗಿಸುತ್ತಿದ್ದ ₹1.40 ಕೋಟಿ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.
  • ಸಾಗರ ಗ್ರಾಮಾಂತರ (Sagar rural) ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಿಸುತ್ತಿದ್ದ ₹20 ಲಕ್ಷ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.
  • ವಿನೋಬನಗರ ಠಾಣೆ‌ (Vinoba nagar) ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಸಾಗಿಸುತ್ತಿದ್ದ ಒಟ್ಟು 100 ಬ್ಯಾಗ್ ಗಳಲ್ಲಿದ್ದ ಅಂದಾಜು ₹1.56 ಲಕ್ಷ ಮೌಲ್ಯದ 26 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.

Raid | ಶಾಕಿಂಗ್ ಸುದ್ದಿ, ಶಿವಮೊಗ್ಗದಲ್ಲಿ ಲಾರಿಯಲ್ಲಿ ತುಂಬಿದ್ದ ರಾಶಿ ರಾಶಿ ನಾನ್ ಸ್ಟಿಕ್ ದೋಸೆ ತವಾ, 30 ಟನ್ ಬೇಳೆ ಇನ್ನಿತರ ಸಾಮಗ್ರಿಗಳು ಸೀಜ್

error: Content is protected !!