ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ತೀರ್ಥಹಳ್ಳಿ-ಕುಂದಾಪುರ (thirthahalli- kundapura) ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್ (balebare chat) ಎರಡು ಭಾಗಗಳಲ್ಲಿ ಕಾಂಕ್ರಿಟ್ ಪೇವ್ ಮೆಂಟ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು ಈ ಮಾರ್ಗದಲ್ಲಿ ಏ.15 ರವರೆಗೆ ವಾಹನ ಸಂಚಾರ ನಿಷೇಧಿಸಿ ಮತ್ತು ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ.
READ | ಅರಕೆರೆ ಚೆಕ್ ಪೋಸ್ಟ್ ನಲ್ಲಿ ಕೋಟಿಗಟ್ಟಲೇ ಹಣ ಸೀಜ್, ವಾಹನದಲ್ಲಿತ್ತು ಕಂತೆ -ಕಂತೆ ಹಣದ ರಾಶಿ
ಈ ಹಿಂದೆ ಏಪ್ರಿಲ್ 5 ರವರೆಗೆ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಕಾಮಗಾರಿ ನಡೆಯುವಾಗ ಹಲವು ಬಾರಿ ಯಂತ್ರೋಪಕರಣಗಳು ದುರಸ್ಥಿಗೆ ಒಳಪಟ್ಟ ಕಾರಣ ಸಂಚಾರ ವ್ಯವಸ್ಥೆಯನ್ನು ಏ.15 ರವರೆಗೆ ಅಂದರೆ ಹೆಚ್ಚುವರಿ ಹತ್ತು ದಿವಸುಗಳ ಕಾಲ ವಿಸ್ತರಿಸಲಾಗಿದೆ.
ಪರ್ಯಾಯ ಮಾರ್ಗದ ಬಗ್ಗೆ ಮಾಹಿತಿ
ಹಾಲಿ ಬಳಕೆ ಮಾಡುತ್ತಿರುವ ರಸ್ತೆಗಳು ರಾಜ್ಯ ಹೆದ್ದಾರಿ-52 ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆ ಹೋಗುವ ಲಘು ವಾಹನಗಳು ಪರ್ಯಾಯ ಮಾರ್ಗವಾಗಿ ತೀರ್ಥಹಳ್ಳಿ-ಹಾಲಾಡಿ-ಬಸ್ರೂರು-ಕುಂದಾಪುರ ರಸ್ತೆ ಅಥವಾ ತೀರ್ಥಹಳ್ಳಿ-ಹೆಬ್ರಿ-ಉಡುಪಿ-ಕುಂದಾಪುರ ಈ ರಸ್ತೆ ಮೂಲಕ ಸಂಚರಿಸಬೇಕಾಗಿದೆ. ರಾಜ್ಯ ಹೆದ್ದಾರಿ-52 ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆ ಹೋಗುವ ಭಾರಿ ವಾಹನಗಳು ಪರ್ಯಾಯ ಮಾರ್ಗವಾಗಿ ತೀರ್ಥಹಳ್ಳಿ- ಕಾನಗೋಡು- ನಗರ- ಕೊಲ್ಲೂರು ಕುಂದಾಪುರ ಈ ರಸ್ತೆ ಮೂಲಕ ಸಂಚರಿಸಬೇಕಾಗಿದೆ.
ಶಿವಮೊಗ್ಗ/ ಸಾಗರ ಕಡೆಯಿಂದ ಹೊಸನಗರದ ಮೂಲಕ ಕುಂದಾಪುರ ಕಡೆ ಹೋಗುವ ಲಘು/ ಭಾರಿ ವಾಹನಗಳು ಪರ್ಯಾಯ ಮಾರ್ಗವಾಗಿ ಹೊಸನಗರ- ನಗರ- ಕೊಲ್ಲೂರು ರಸ್ತೆ ಮೂಲಕ ಸಂಚರಿಸಲು ಅಧಿಸೂಚನೆ ಹೊರಡಿಸಿದ್ದಾರೆ.