ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಮತದಾನಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದ್ದಾರೆ.
ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 7,28,886 ಪುರುಷ, 7,43,713 ಮಹಿಳಾ, 32 ಇತರೆ ಹಾಗೂ 696 ಸೇವಾ ಮತದಾರರು ಸೇರಿ ಒಟ್ಟು 14,73,327 ಮತದಾರರಿದ್ದಾರೆ.
ಮತಗಟ್ಟೆ ಮತ್ತು ಅಧಿಕಾರಿಗಳ ನೇಮಕ
ಜಿಲ್ಲಾ ವ್ಯಾಪ್ತಿಯಲ್ಲಿ 1775+7 ಪೂರಕ ಸೇರಿದಂತೆ ಒಟ್ಟು 1782 ಮತಗಟ್ಟೆಗಳಿವೆ. ಜಿಲ್ಲೆಯಲ್ಲಿ ಮತದಾನಕ್ಕೆ ಸಂಬಂಧಿದಂತೆ 2050 ಪಿಆರ್.ಓ, 2050 ಎಪಿಆರ್.ಓ, 4100 ಪಿಓ ಸೇರಿದಂತೆ ಒಟ್ಟು 8200 ಮತಗಟ್ಟೆ ಅಧಿಕಾರಿ/ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಹಾಗೂ 83 ಮೈಕ್ರೋ ಅಬ್ಸರ್ವರ್’ಗಳನ್ನು ನೇಮಕ ಮಾಡಲಾಗಿದೆ.
ಎಷ್ಟು ಬಸ್’ಗಳ ನಿಯೋಜನೆ?
ಒಟ್ಟು 8156 ಸಿಬ್ಬಂದಿ ಮತಗಟ್ಟೆಗಳಿಗೆ ಕರೆದೊಯ್ಯಲು ಬಸ್’ಗಳ ವ್ಯವಸ್ಥೆ ಮಾಡಲಾಗಿದೆ. ಶಿವಮೊಗ್ಗ ?ಗ್ರಾಮಾಂತರಕ್ಕೆ 16 ಬಸ್, ಭದ್ರಾವತಿಗೆ 40, ಶಿವಮೊಗ್ಗ ನಗರಕ್ಕೆ 15, ತೀರ್ಥಹಳ್ಳಿಗೆ 45, ಶಿಕಾರಿಪುರಕ್ಕೆ 43, ಸೊರಬಕ್ಕೆ 36, ಸಾಗರಕ್ಕೆ 31 ಮತ್ತು ಹೊಸನಗರಕ್ಕೆ 14 ಸೇರಿದಂತೆ ಒಟ್ಟು 240 ಬಸ್’ಗಳನ್ನು ನಿಯೋಜಿಸಲಾಗಿದೆ.
Route Change | ಮೇ 13ರಂದು ಶಿವಮೊಗ್ಗ ನಗರದಲ್ಲಿ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗದ ಮಾಹಿತಿ ಇಲ್ಲಿದೆ