Diploma admission | ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ, ಆಯ್ಕೆಯಾದರೆ ಶಿಷ್ಯವೇತನದೊಂದಿಗೆ ಉಚಿತ ವಸತಿ

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆಯು 2023-24ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಲ್ಯಾಟರಲ್ ಎಂಟ್ರಿ ಮುಖಾಂತರ ನೇರವಾಗಿ 02ನೇ ವರ್ಷದ ಡಿಪ್ಲೊಮಾ ಕೋರ್ಸ್ ಸೇರಲು ಸಾಮಾನ್ಯ ವರ್ಗದವರಿಗೆ 25 ಹಾಗೂ ಪ.ಜಾ./ಪ.ಪಂ. ದವರಿಗೆ 27 ವಯೋಮಿತಿಯೊಳಗಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

READ | ಶಿವಮೊಗ್ಗದಲ್ಲಿ ದೇಶದ 5ನೇ ರಾಷ್ಟ್ರೀಯ ರಕ್ಷಾ ವಿವಿ ಕ್ಯಾಂಪಸ್ ಆರಂಭ, ಯಾವೆಲ್ಲ ಕೋರ್ಸ್’ಗಳು ಲಭ್ಯ? ಪೂರ್ಣ ಮಾಹಿತಿ ಇಲ್ಲಿದೆ

ಗಣಿತ, ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರದೊಂದಿಗೆ 10+2 ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಯಾವುದೇ ಜವಳಿ ವಿಭಾಗದ ವೃತ್ತಿಪರ ವಿಭಾಗದಲ್ಲಿ 10+2 ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ 10ನೇ ತರಗತಿ ತೇರ್ಗಡೆ ಜೊತೆಗೆ 2 ವರ್ಷಗಳ ಐಟಿಐ ತೇರ್ಗಡೆಯಾದವರು ಅಥವಾ 10+2 ಜೊತೆಗೆ 2 ವರ್ಷಗಳ ಐಟಿಐ ತೇರ್ಗಡೆಯಾದವರು ಎರಡನೇ ವರ್ಷದ ಡಿಪ್ಲೋಮಾ ಕೋರ್ಸ್‍ಗೆ ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ. ಜವಳಿ ವಿಭಾಗದ ವೃತ್ತಿಪರ ಸ್ಟ್ರೀಮ್‍ನಲ್ಲಿ 10+2 ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಐ.ಐ.ಹೆಚ್.ಟಿ. ನಡೆಸುವ ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರದಲ್ಲಿ ಬ್ರಿಡ್ಜ್ ಕೋರ್ಸ್‍ನ್ನು ಅಭ್ಯಾಸ ಮಾಡಬೇಕು.
ಗದಗ, ಬೆಟಗೇರಿಯ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ 12 ಅಭ್ಯರ್ಥಿಗಳು, ತಮಿಳುನಾಡಿನ ಸೇಲಂ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ 10, ಆಂದ್ರಪ್ರದೇಶದ ನಲ್ಲೂರು ಜಿಲ್ಲೆಯ ವೆಂಕಟಗಿರಿಯ ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ 3 ಅಭ್ಯರ್ಥಿಗಳು, ಕೇರಳದ ಕಣ್ಣೂರು ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ 2 ಅಭ್ಯರ್ಥಿಗಳು ಒಟ್ಟು 27 ಅಭ್ಯರ್ಥಿಗಳಿಗೆ ಅವಕಾಶವಿದ್ದು, ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೋಡೀಕೃತ ಅಂಕಗಳು ಮೆರಿಟ್ ಲೆಕ್ಕಾಚಾರದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ವ್ಯಾಸಂಗ ಸಮಯದಲ್ಲಿ ವಿದ್ಯಾರ್ಥಿಗೆ ಪ್ರತಿ ತಿಂಗಳು ₹2,500 ರಂತೆ ಶಿಷ್ಯವೇತನ ಹಾಗೂ ವಸತಿ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದು ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ದಿ:31/05/23ರೊಳಗಾಗಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯನ್ನು ಖುದ್ದಾಗಿ ಅಥವಾ ದೂ.ಸಂ.: 08372-297221/ 9448644074 ಅಥವಾ ಜಿಲ್ಲೆಯ ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಶಿವಮೊಗ್ಗ ದೂ.ಸಂ.: 08182-223405 ಅಥವಾ ಇಲಾಖೆ ವೆಬ್‍ಸೈಟ್ https://khtigadag.ac.in/lateralentryadmissionorm.pdf  ನ್ನು ಸಂಪರ್ಕಿಸುವುದು.

Death | ಕಿರುಚಿತ್ರಗಳಲ್ಲಿ ನಟಿಸಿದ ಬಾಲ ನಟ ತುಂಗಾನದಿಯಲ್ಲಿ ಮುಳುಗಿ ಸಾವು

error: Content is protected !!