
ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲೆಯ ನಾಲ್ಕು ರೈಲ್ವೆ ನಿಲ್ದಾಣಗಳ (Shimoga Railway station) ಆಧುನೀಕರಣಕ್ಕೆ ಯೋಜನೆ ರೂಪಿಸಲಾಗಿದೆ.
ತಾಳಗುಪ್ಪ, ಶಿವಮೊಗ್ಗ ನಗರ, ಸಾಗರ ರೈಲ್ವೆ ನಿಲ್ದಾಣಗಳನ್ನು ಆಧುನೀಕರಣಗೊಳಿಸಲು ಕ್ರಮ ಕೈಗೊಳ್ಳಲು ಸಂಸದ ಬಿ.ವೈ.ರಾಘವೇಂದ್ರ (B.Y.Raghavendra) ಅವರು ರೈಲ್ವೆ ಇಲಾಖೆಯನ್ನು ಒತ್ತಾಯಿಸುತ್ತಲೇ ಇದ್ದರ ಫಲವಾಗಿ ಕೇಂದ್ರ ಸರ್ಕಾರವು 2023-24ರ ಬಜೆಟ್ ನಲ್ಲಿ ಘೋಷಿಸಿದ ‘ಅಮೃತ್ ಭಾರತ್ ಯೋಜನೆ’ ಅಡಿ ₹22.5 ಕೋಟಿ ವೆಚ್ಚದಲ್ಲಿ ತಾಳಗುಪ್ಪ ರೈಲ್ವೆ ನಿಲ್ದಾಣವನ್ನು, ₹19.28 ಕೋಟಿ ವೆಚ್ಚದಲ್ಲಿ ಶಿವಮೊಗ್ಗ ನಗರದ ರೈಲ್ವೆ ನಿಲ್ದಾಣವನ್ನು ಮತ್ತು ₹21.10 ಕೋಟಿಗಳ ವೆಚ್ಚದಲ್ಲಿ ಸಾಗರ ರೈಲ್ವೆ ನಿಲ್ದಾಣವನ್ನು ಹಾಗೂ ₹33.00 ಕೋಟಿಗಳ ವೆಚ್ಚದಲ್ಲಿ ಶಿವಮೊಗ್ಗ ಗೂಡ್ಸ್ ಯಾರ್ಡ್ ಅನ್ನು ಅಭಿವೃದ್ಧಿಪಡಿಸುವ ಸಲುವಾಗಿ ಕೇಂದ್ರ ರೈಲ್ವೆ ಇಲಾಖೆಯು ಅನುದಾನ ಒದಗಿಸಿದೆ.

ಸುಮಾರು ₹100 ಕೋಟಿಗಳ ಅನುದಾನವನ್ನು ಈ ನಾಲ್ಕು ರೈಲ್ವೆ ನಿಲ್ದಾಣ, ಯಾರ್ಡ್ ಗಳ ಅಭಿವೃದ್ಧಿಗಾಗಿ ಒದಗಿಸಿರುವ ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್, ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವೈಯಕ್ತಿಕವಾಗಿ ಹಾಗೂ ಕ್ಷೇತ್ರದ ಜನತೆಯ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ.
– ಬಿ.ವೈ.ರಾಘವೇಂದ್ರ, ಸಂಸದರು
ರೈಲು ನಿಲ್ದಾಣಗಳು ಇನ್ನಷ್ಟು ಜನಸ್ನೇಹಿ
ಪ್ರಯಾಣಿಕ ಸ್ನೇಹಿ ಸವಲತ್ತುಗಳನ್ನು (ಗ್ರಾನೇಟ್ ನೆಲಹಾಸಿನ ಪ್ಲಾಟ್ ಫಾರಂ, ಡಿಜಿಟಲ್ ಸಿಗ್ನಲ್ಸ್, ಪ್ಲಾಟ್ ಫಾರಂ ಶೆಲ್ಪರ್, ಪಾರ್ಕಿಂಗ್ ಜಾಗದಲ್ಲಿ ಶೆಡ್ ನಿರ್ಮಾಣ, ಕಾಂಪೌಂಡ್ ವಾಲ್ ನಿರ್ಮಾಣ, ಸರ್ಕುಲೇಟಿಂಗ್ ಏರಿಯಾ ಅಭಿವೃದ್ಧಿ, ಸ್ಪೇಷನ್ ನಿಲ್ದಾಣದ ಸೌಂದರೀಕರಣ, ನಿಲ್ದಾಣದ ಮುಂಭಾಗದ ಉದ್ಯಾವನ, ಫೂಟ್ ಓವರ್ ಬ್ರಿಡ್, ಆಧುನಿಕ ಶೌಚಾಲಯಗಳು, ಉತ್ತಮ ಗುಣಮಟ್ಟದ ವಿದ್ಯುತ್ ಬೆಳಕಿನ ವ್ಯವಸ್ಥೆ, ಸಿ.ಸಿ.ಟಿ.ವಿ. ರೈಲ್ವೆ ಉದ್ಘೋಷಣಾ ವ್ಯವಸ್ಥೆ ಇಂತಹ ಹಲವಾರು ಸವಲತ್ತುಗಳನ್ನು ಒದಗಿಸುವ ಯೋಜನೆಯು ಮಂಜೂರಾತಿಗೊಂಡಿದೆ.
READ | ಶಿವಮೊಗ್ಗದಿಂದ ವಿಮಾನ ಹಾರಾಟ ಇನ್ನಷ್ಟು ವಿಳಂಬ, ಕಾರಣವೇನು? ಮೊದಲ ಹಂತದಲ್ಲಿ ಯಾವ ಮಾರ್ಗದಲ್ಲಿ ವಿಮಾನ ಹಾರಾಟ?
ಗೂಡ್ಸ್ ಯಾರ್ಡ್ ಪ್ರಯೋಜನಗಳೇನು?
ಹಾಗೆಯೇ ಶಿವಮೊಗ್ಗ ಗೂಡ್ಸ್ ಯಾರ್ಡ್(Goods Yard)ನಲ್ಲಿ ಅಗತ್ಯ ಮೂಲ ಸೌಕರ್ಯವನ್ನು ಹೆಚ್ಚಿಸುವ ಮೂಲಕ ಶಿವಮೊಗ್ಗ ಜಿಲ್ಲೆಗೆ ಅಗತ್ಯವಿರುವ ರಸಗೊಬ್ಬರ, ಪಡಿತರ ಧಾನ್ಯ, ಸಿಮೆಂಟ್, ಕಬ್ಬಿಣ ಮತ್ತಿತರ ಅಗತ್ಯ ವಸ್ತುಗಳನ್ನು ಶೀಘ್ರವಾಗಿ ಲಭ್ಯವಾಗುವಂತೆ ಮಾಡಲು ಕ್ರಮಕೈಗೊಳ್ಳುವುದಾಗಿ ರೈಲ್ವೆ ಉನ್ನತಾಧಿಕಾರಿಗಳು ತಿಳಿಸಿದ್ದಾರೆ.

ಕಾಮಗಾರಿಗಳು ಯಾವಾಗ ಪೂರ್ಣ?
ಭದ್ರಾವತಿಯ ಕಡದಕಟ್ಟೆ ಹತ್ತಿರ ರೈಲ್ವೆ ಎಲ್.ಸಿ 33, ಶಿವಮೊಗ್ಗ ನಗರದ ಸವಳಂಗ ರಸ್ತೆಯ ಎಲ್.ಸಿ 49 ಹಾಗೂ ಕಾಶಿಪುರ ಗೇಟ್ ಬಳಿಯ ಎಲ್.ಸಿ 52 ರ ಬದಲಿಗೆ ನಿರ್ಮಿಸಲಾಗುತ್ತಿರುವ ROB(Railway over bridge)/ RUB (Railway under bridge) ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, ಅವಳಿ ನಗರಗಳ ವಾಹನಗಳ ದಟ್ಟಣೆಯ ಸಮಸ್ಯೆಗೆ ಈ ಯೋಜನೆಗಳನ್ನು ಅತ್ಯಂತ ತ್ವರಿತವಾಗಿ ಪೂರ್ಣಗೊಳಿಸುವ ಅಗತ್ಯತೆಯನ್ನು ತಿಳಿಯಪಡಿಸಲಾಗಿದ್ದು, ಕ್ರಮವಾಗಿ ಡಿಸೆಂಬರ್ 2023. ಅಕ್ಟೋಬರ್ 2023 ಹಾಗೂ ಜೂನ್ 2023ರ ಒಳಗೆ ಪೂರ್ಣಗೊಳಿಸುವುದಾಗಿ ನೂರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕರು ತಿಳಿಸಿರುತ್ತಾರೆ.
Water scarcity | ಶಿವಮೊಗ್ಗದಲ್ಲಿ ಕುಡಿಯುವ ನೀರಿನ ಕೊರತೆ, ಎಲ್ಲಿ ಎಷ್ಟು ಕೊಳವೆ ಬಾವಿ ಕೊರೆಯಲಾಗಿದೆ?