ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: 2023-24 ನೇ ಸಾಲಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೇಲಿನ ಹನಸವಾಡಿ ಡಾ.ಎ.ಪಿ.ಜೆ ಅಬ್ದುಲ್ ಕಲಾಂ (Dr.APJ Abdul Kalam) ಹೆಣ್ಣು ಮಕ್ಕಳ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ ತರಗತಿಗೆ ಉಚಿತ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
READ | ಶಿವಮೊಗ್ಗದಲ್ಲಿ ಯುವತಿ ಕಿಡ್ನ್ಯಾಪ್ ಕೇಸ್’ಗೆ ಬಿಗ್ ಟ್ವಿಸ್ಟ್, ಇದು ಪೊಲೀಸರಿಗೆ ಗೊತ್ತಾಗಿದ್ದು ಹೇಗೆ?
ಯಾರಿಗೆಲ್ಲ ಉಚಿತ ಪ್ರವೇಶಕ್ಕೆ ಅವಕಾಶ?
ಅರ್ಜಿಯನ್ನು ದಾಖಲೆಗಳ ಸಹಿತ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಕಾಲೇಜಿಗೆ ತೆರಳಿ ಪ್ರಾಂಶುಪಾಲರ ಮೂಲಕ ಮೇ 25 ರೊಳಗೆ ಉಚಿತವಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು ಶೇ.75 ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ವಿದ್ಯಾರ್ಥಿಗಳಿಗೆ ಮತ್ತು ಶೇ.25 ರಷ್ಟು ಇತರೆ ಹಿಂದುಳಿದ ವರ್ಗದ ಸಮುದಾಯಗಳಿಗೆ ಮೀಸಲಿರಿಸಲಾಗಿದೆ. ಅಲ್ಪಸಂಖ್ಯಾತರ ಯಾವುದೇ ವಸತಿ ಶಾಲೆ/ ಸರ್ಕಾರಿ/ ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಗಳಲ್ಲಿ 10ನೇ ತರಗತಿ ಅಧ್ಯಯನ ಮಾಡಿ ಉತ್ತೀರ್ಣರಾಗಿರಬೇಕು. ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯವು ₹2.50 ಲಕ್ಷಗಳನ್ನು ಮೀರಿರಬಾರದು. ವಿಕಲಚೇತನರಿಗೆ ಶೇ.3 ರಷ್ಟು ಪ್ರವೇಶ ಮೀಸಲಿರಿಸಿದೆ.
ವಿದ್ಯಾರ್ಥಿನಿಯರಿಗೆ ಪುಸ್ತಕ, ಆಹಾರ, ವಸತಿ ಫ್ರಿ
ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ಪಠ್ಯಪುಸ್ತಕ, ಆಹಾರ ಮತ್ತು ವಸತಿ, ಸಮವಸ್ತ್ರ, ಶುಚಿ ಸಂಭ್ರಮ ಕಿಟ್, ಲೇಖನ ಸಾಮಗ್ರಿ ಸೇರಿದಂತೆ ಇತರೆ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುವುದು. ತಾಂತ್ರಿಕ ಮತ್ತು ವೈದ್ಯಕೀಯ ಮತ್ತು ಇತ್ಯಾದಿ ವೃತ್ತಿಪರ ಶಿಕ್ಷಣಕ್ಕೆ ಅನುಕೂಲವಾಗಲು ವಿಜ್ಞಾನ ವಿಷಯಗಳಿಗೆ ಹಾಗೂ ವಾಣಿಜ್ಯ ವಿಷಯಗಳಿಗೆ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುವುದು. ವೃತ್ತಿಪರ ಕೋರ್ಸ್ಗಳ (ಎನ್ಇಇಟಿ/ಜೆಇಇ (ಮೇನ್ಸ್ ಅಂಡ್ ಅಡ್ವಾನ್ಸ್ಡ್)/ ಕೆಸಿಇಟಿ) ಪ್ರವೇಶ ಪರೀಕ್ಷೆಗೆ ವಿಶೇಷ ತರಬೇತಿಯನ್ನು ಉಚಿತವಾಗಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರ ದೂರವಾಣಿ ಸಂಖ್ಯೆ : 08182 – 220206 / 9483623537 ಗಳನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2024ರ ವೇಳೆಗೆ ಸಿಗಲಿದೆ ಸಾರವರ್ಧಿತ ಅಕ್ಕಿ, ಏನಿದರ ವಿಶೇಷ, ಸಾರವರ್ಧಿತ ಅಕ್ಕಿ ಪತ್ತೆ ಹೇಗೆ?