Guest teacher | ಶಿವಮೊಗ್ಗದಲ್ಲಿ ಅತಿಥಿ ಶಿಕ್ಷಕರ ನೇಮಕಾತಿ, ಯಾರೆಲ್ಲ‌ ಅರ್ಜಿ‌ ಸಲ್ಲಿಸಬಹುದು?

teacher

 

 

ಸುದ್ದಿ‌ ಕಣಜ.ಕಾಂ ಶಿವಮೊಗ್ಗ
SHIVAMOGGA: 2023-24ನೇ ಸಾಲಿಗೆ ಶಿವಮೊಗ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಶಿಕ್ಷಣ ಇಲಾಖೆಯ ಮಾರ್ಗಸೂಚಿ ಹಾಗೂ ವಿದ್ಯಾರ್ಹತೆಗಳನ್ವಯ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

READ | ಶಿವಮೊಗ್ಗದಲ್ಲಿ ದೇಶದ 5ನೇ ರಾಷ್ಟ್ರೀಯ ರಕ್ಷಾ ವಿವಿ ಕ್ಯಾಂಪಸ್ ಆರಂಭ, ಯಾವೆಲ್ಲ ಕೋರ್ಸ್’ಗಳು ಲಭ್ಯ? ಪೂರ್ಣ ಮಾಹಿತಿ ಇಲ್ಲಿದೆ 

ಎಲ್ಲೆಲ್ಲಿ ಅತಿಥಿ ಶಿಕ್ಷಕರ ನೇಮಕ?
ಮೊರಾರ್ಜಿ ದೇಸಾಯಿ/ ಕಿತ್ತೂರು ರಾಣಿ ಚೆನ್ನಮ್ಮ/ ಶ್ರೀ ನಾರಾಯಣ ಗುರು/ ಅಟಲ್ ಬಿಹಾರಿ ವಾಜಪೇಯಿ/ ಇಂದಿರಾ ಗಾಂಧಿ/ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಖಾಲಿ ಇರುವ ವಿಷಯವಾರು ಶಿಕ್ಷಕರ ಹುದ್ದೆಗಳಿಗೆ ಅರ್ಜಿ.ಬಆಸಕ್ತ ಅಭ್ಯರ್ಥಿಗಳು ನೇರವಾಗಿ ಆಯಾ ವಸತಿ ಶಾಲೆಗೆ ಜೂ.5 ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಸೂಚಿಸಿದೆ. ಅತಿಥಿ ಶಿಕ್ಷಕರಿಗೆ ಮಾಸಿಕ ಗೌರವಧನ ಸರ್ಕಾರದಿಂದ ₹16650 ನಿಗದಿಯಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಶಿವಮೊಗ್ಗ ಹಾಗೂ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಶ್ರೀ ನಾರಾಯಣ ಗುರು/ ಅಟಲ್ ಬಿಹಾರಿ ವಾಜಪೇಯಿ/ ಇಂದಿರಾ ಗಾಂಧಿ/ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಕಚೇರಿ ವೇಳೆ ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Kuvempu University | ಮಗಳ ಬರ್ತ್ ಡೇಗೆ ಸುತ್ತೋಲೆ ಹೊರಡಿಸಿ ಪೇಚಿಗೆ ಸಿಲುಕಿದ ಕುವೆಂಪು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ

error: Content is protected !!