ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023(Karnataka assembly election 2023)ರ ಸಂಬಂಧ ಮೇ 13 ರಂದು ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಮತ ಎಣಿಕೆ (counting) ಕಾರ್ಯವು ನಡೆಯಲಿರುವುದರಿಂದ, ಸಾರ್ವಜನಿಕರಿಗೆ ಸುಗಮ ಸಂಚಾರದ ಹಿತ ದೃಷ್ಟಿಯಿಂದ ಅಂದು ವಾಹನಗಳ ಸಂಚಾರಕ್ಕೆ ಈ ಕೆಳಕಂಡಂತೆ ಮಾರ್ಗ ಬದಲಾವಣೆ ಮಾಡಲಾಗಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಕೋರಲಾಗಿದೆ.
READ | ಚೋರಡಿ ಬಳಿ ಭೀಕರ ಅಪಘಾತ, ಮೃತರ ಸಂಖ್ಯೆ ಎಷ್ಟು? ಯಾರ್ಯಾರು ಸಾವು? 30 ಜನ ಆಸ್ಪತ್ರೆಗೆ ಶಿಫ್ಟ್
ಇಲ್ಲಿ ಪಾರ್ಕಿಂಗ್ ನಿಷೇಧ
- ಸಹ್ಯಾದ್ರಿ ಕಾಲೇಜಿನ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಮತ್ತು ನಿಲುಗಡೆಯನ್ನು ನಿಷೇಧಿಸಲಾಗಿದೆ.
- ಎಂ.ಆರ್.ಎಸ್ ಸರ್ಕಲ್ ನಿಂದ ಬಿ.ಎಚ್ ರಸ್ತೆ, ವಿದ್ಯಾನಗರ, ಮತ್ತೂರು ಕ್ರಾಸ್ ವರೆಗೆ ಸಾರ್ವಜನಿಕರ ವಾಹನಗಳು ಓಡಾಡದಂತೆ ನಿಷೇಧಿಸಿದೆ.
- ಏಜೆಂಟರು ಮತ್ತು ಎಲ್ಲ ಇಲಾಖೆಯ ಅಧಿಕಾರಿಗಳ ವಾಹನಗಳನ್ನು ಸಹ್ಯಾದ್ರಿ ಸೈನ್ಸ್ ಕಾಲೇಜು ಎದುರು, ವಜ್ರ ಮಹೋತ್ಸವ ಕಟ್ಟಡದ ಎದುರು ಮತ್ತು ಬಿ.ಎಚ್. ರಸ್ತೆಗೆ ಹೊಂದಿಕೊಂಡಂತಿರುವ ಮ್ಯಾಚ್ ಫ್ಯಾಕ್ಟರಿಗೆ ಸೇರಿದ ಮೈದಾನದಲ್ಲಿ ಪಾರ್ಕಿಂಗ್ ಮಾಡುವುದು.
- ಸಾರ್ವಜನಿಕರ ಕಾರುಗಳು ಮತ್ತು ದ್ವಿ ಚಕ್ರ ವಾಹನಗಳನ್ನು ಮಾತ್ರ ಎಂ.ಆರ್.ಎಸ್ ನಿಂದ ಎನ್.ಆರ್ ಪುರ ರಸ್ತೆಯ ಎಡಭಾಗದಲ್ಲಿ ಪಾರ್ಕಿಂಗ್ ಮಾಡುವುದು.
- ಸಾರ್ವಜನಿಕರ ಎಲ್ಲ ತರದ ವಾಹನಗಳನ್ನು ಎಂ.ಆರ್.ಎಸ್. ಸರ್ಕಲ್ ನ ಹತ್ತಿರವಿರುವ ಕೆ.ಇ.ಬಿ ಸಮುದಾಯ ಭವನದ ಹಿಂಭಾಗ ಮತ್ತು ಬೈಪಾಸ್ ರಸ್ತೆಗೆ ಹೊಂದಿಕೊಂಡಂತಿರುವ ಸಹ್ಯಾದ್ರಿ ಕಾಲೇಜಿನ ಸ್ಟೇಡಿಯಂ ಹತ್ತಿರ ಪಾರ್ಕಿಂಗ್ ಮಾಡುವುದು.
ಪರ್ಯಾಯ ಮಾರ್ಗದ ಮಾಹಿತಿ
- ಬೆಂಗಳೂರು, ಭದ್ರಾವತಿ, ಎನ್.ಆರ್ ಪುರ ಕಡೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು ಎಲ್ಲಾ ಬಸ್ಸುಗಳು ಹಾಗೂ ಕಾರು ದ್ವಿಚಕ್ರ, ತ್ರಿಚಕ್ರ ವಾಹನಗಳು ಬೈಪಾಸ್ ರಸ್ತೆ ಮುಖಾಂತರ ಹೋಗುವುದು.
- ಚಿತ್ರದುರ್ಗ, ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲಾ ಭಾರಿ ವಾಹನ ಮತ್ತು ಬಸ್ಸುಗಳು ಬಿ.ಎಚ್ ರಸ್ತೆ ಮಾರ್ಗವಾಗಿ ಬಸ್ಟಾಂಡ್ ಗೆ ಹೋಗುವುದು.
- ಹೊನ್ನಾಳಿ ದಾವಣಗೆರೆಯಿಂದ ಬರುವ ಎಲ್ಲಾ ಭಾರಿ ವಾಹನಗಳು, ಎಲ್ಲಾ ಬಸ್ ಗಳನ್ನು ವಿನೋಬನಗರ 100 ಅಡಿ ರಸ್ತೆ ಮಾರ್ಗವಾಗಿ ಹೋಗುವುದು.
- ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ ಹರಿಹರ, ದಾವಣಗೆರೆಗೆ ಹೋಗುವ ಎಲ್ಲಾ ಬಸ್ ಗಳು ಎ.ಎ ಸರ್ಕಲ್, ಗೋಪಿ ಸರ್ಕಲ್, ಮಹಾವೀರ ಸರ್ಕಲ್, ಕೆಇಬಿ ಸರ್ಕಲ್ ಮುಖಾಂತರವಾಗಿ ಹೋಗುವುದು.
- ಕೆಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣ ದಿಂದ ಬೆಂಗಳೂರು ಭದ್ರಾವತಿ ಎನ್.ಆರ್ ಪುರ ಕಡೆಗೆ ಹೋಗುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆ ಮುಖಾಂತರ ಎಂ.ಆರ್.ಎಸ್ ಸರ್ಕಲ್ ಕಡೆಗೆ ಹೋಗುವುದು.
Elephant camp | ಸಕ್ರೆಬೈಲು ಆನೆ ಬಿಡಾರ ಪ್ರವೇಶಕ್ಕೆ 2 ದಿನ ನಿರ್ಬಂಧ, ಕಾರಣವೇನು?