
ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮಾಚೇನಹಳ್ಳಿ (Machenahalli) 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೊಸದಾಗಿ 110 ಕೆವಿ ಮಾರ್ಗ ಹಾಗೂ ಪರಿವರ್ತಕ ಚಾಲನೆಗೊಳಿಸುವ ಕಾಮಗಾರಿಯನ್ನು ಕ.ವಿ.ಪ್ರ.ನಿ.ನಿ ವತಿಯಿಂದ ಹಮ್ಮಿಕೊಂಡಿರುವ ಕಾರಣ ಈ ಮಾರ್ಗದಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಮೇ 21ರ ಬೆಳಗ್ಗೆ 8 ರಿಂದ ಸಂಜೆ 7 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಪವರ್ ಕಟ್?
ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಕಿಯೊನಿಕ್ಸ್ ಐ ಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ, ನವುಲೆ, ಬಸವಾಪುರ, ಹಾತಿಕಟ್ಟೆ ಹೊನ್ನವಿಲೆ, ಅಮರಾವತಿ ಕ್ಯಾಂಪ್, ಶೆಟ್ಟಿಹಳ್ಳಿ, ಹಳೇಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಮಾಳೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
READ | ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಉದ್ಯೋಗಾವಕಾಶ, ಅರ್ಜಿ ಸಲ್ಲಿಕೆಗೆ ಮೇ 29 ಕೊನೆಯ ದಿನ
ಮೆಸ್ಕಾಂ ಜನ ಸಂಪರ್ಕ ಸಭೆ
ಎನ್.ಟಿ.ರಸ್ತೆಯ ನ್ಯೂಮಂಡ್ಲಿಯಲ್ಲಿರುವ ಮೆಸ್ಕಾಂ (MESCOM) ನಗರ ಉಪ ವಿಭಾಗ 2ರಲ್ಲಿ ಮೇ 20ರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಜನ ಸಂಪರ್ಕ ಸಭೆ ಆಯೋಜಿಸಲಾಗಿದೆ. ಸಭೆಗೆ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಿ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಈ ಉಪ ವಿಭಾಗ ವ್ಯಾಪ್ತಿಯ ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Congress | ಶಿವಮೊಗ್ಗದಲ್ಲಿ ಮೂವರಲ್ಲಿ ಯಾರಿಗೆ ಸಚಿವ ಸ್ಥಾನ? ಯಾರದ್ದೇನು ಪ್ಲಸ್ ಪಾಯಿಂಟ್