ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಭದ್ರಾವತಿಯ 33 ವರ್ಷದ ಪುರುಷನಿಗೆ 20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ₹20,000 ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 6 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ ಆದೇಶಿಸಲಾಗಿದೆ.
READ | ಖಾಲಿ ಶಿಕ್ಷಕ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?
2019 ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ 33 ವರ್ಷದ ವ್ಯಕ್ತಿಯೊಬ್ಬನು 13 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುತ್ತಾನೆಂದು ನೀಡಿದ ದೂರಿನ ಮೇರೆಗೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.
ಪ್ರಕರಣದಲ್ಲಿ ಆಗಿನ ತನಿಖಾಧಿಕಾರಿ ಮಂಜುನಾಥ್ ತನಿಖೆ ಕೈಗೊಂಡು ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ. ಪ್ರಕರಣದಲ್ಲಿ ಭದ್ರಾವತಿ ಗ್ರಾಮಾಂತರ ಠಾಣೆ ಎಎಸ್.ಐ ದಿವಾಕರ್ ರಾವ್ ತನಿಖಾ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ.
ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸಿದ್ದು, ಆರೋಪಗಳುದೃಢಪಟ್ಟ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.