ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮೀನುಗಾರಿಕೆ ಮಾಡಲು ಇಚ್ಛಿಸುವವರಿಗೆ ಮೀನುಗಾರಿಕೆ ಇಲಾಖೆಯು 2023-24ನೇ ಸಾಲಿನ ರಾಜ್ಯವಲಯ ಯೋಜನೆಯಡಿ ಸಾಮಗ್ರಿಗಳನ್ನು ವಿತರಿಸುತ್ತಿದೆ. ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕೋರಲಾಗಿದೆ.
READ | ಶಿವಮೊಗ್ಗ- ಬೆಂಗಳೂರು KSRTC ಎಸಿ ಇ-ಬಸ್ ಕಾರ್ಯಾರಂಭ, ಎಷ್ಟಿದೆ ದರ? ಬಸ್ ವಿಶೇಷಗಳೇನು?
ಯಾವುದಕ್ಕೆಲ್ಲ ಇಲಾಖೆಯಿಂದ ಸಹಾಯ?
ಮೀನುಗಾರಿಕೆ ಸಲಕರಣೆ ಕಿಟ್, ಫೈಬರ್ ಗ್ಲಾಸ್ ಹರಿಗೋಲು ವಿತರಣೆ, ಮೀನುಮರಿ ಖರೀದಿಗೆ ಸಹಾಯಧನ, ಕೆರೆ/ಜಲಾಶಯ ಅಂಚಿನಲ್ಲಿ ನಿರ್ಮಿಸಿರುವ ಕೊಳಗಳಲ್ಲಿ ಮೀನುಮರಿ ಪಾಲನೆಗೆ ಸಹಾಯ ಇತ್ಯಾದಿ ಯೋಜನೆಗಳನ್ನು ಅನುಷ್ಟಾನಗೊಳಿಸುತ್ತಿದ್ದು, ಒಳನಾಡು ಮೀನುಗಾರರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಸಂಬಂಧಪಟ್ಟ ತಾಲೂಕು ಮಟ್ಟದ ಕಚೇರಿಗಳನ್ನು ಸಂಪರ್ಕಿಸಿ ಸೇವಾಸಿಂಧು ಪೋರ್ಟಲ್ ಮೂಲಕ ಜೂನ್ 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಮೀನುಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ www.fisheries.karnataka.gov.in ಅಥವಾ ಆಯಾ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊಬೈಲ್ ಸಂಖ್ಯೆ ಶಿವಮೊಗ್ಗ-9986040981, ಭದ್ರಾವತಿ-9743370815, ಶಿಕಾರಿಪುರ ಮತ್ತು ಸೊರಬ -9241584070, ಸಾಗರ, -9538044365, ತೀರ್ಥಹಳ್ಳಿ- 8549933411 ಗಳನ್ನು ಸಂಪರ್ಕಿಸುವುದು.