ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಅಚೀವರ್ಸ್ ಕೋಚಿಂಗ್ ಸೆಂಟರ್ (Achievers Coaching center) ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆ(Competative exams)ಗಳಿಗೆ ಮಿಷನ್ ಖಾಕಿ-ಪಿಎಸ್ಐ-ಪಿಸಿ ಎಂಬ ಒಂದು ತಿಂಗಳ ಉಚಿತ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಸಂಚಾಲಕಿ ಪವಿತ್ರ ತಿಳಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ತಿಲಕ್ ನಗರದ ರಾಘವೇಂದ್ರಸ್ವಾಮಿ ಮಠದ ರಸ್ತೆಯಲ್ಲಿ ನಮ್ಮ ಕೋಚಿಂಗ್ ಸೆಂಟರ್ ಕಳೆದ ಎಂಟು ವರ್ಷಗಳಿಂದ ನಡೆಯುತ್ತಿದೆ. ಸಾವಿರಾರು ಉದ್ಯೋಗಾಕಾಂಕ್ಷಿಗಳು ಇಲ್ಲಿ ತರಬೇತಿ ಪಡೆದು ಉದ್ಯೋಗ ಪಡೆದಿದ್ದಾರೆ. ಈಗ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಒಂದು ತಿಂಗಳ ಕಾಲ ಉಚಿತ ಕಾರ್ಯಾಗಾರವನ್ನು ಜೂ.3ರಿಂದ ಹಮ್ಮಿಕೊಂಡಿದ್ದೇವೆ ಎಂದರು.
READ | ಮೈಸೂರು ನ್ಯಾಯಾಲಯದಲ್ಲಿ 45 ಹುದ್ದೆಗಳು ಖಾಲಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?
ಯಾವೆಲ್ಲ ಪರೀಕ್ಷೆಗಳ ತರಬೇತಿ?
ಈ ಕಾರ್ಯಾಗಾರದಲ್ಲಿ ಕೆಎಎಸ್, ಪಿಎಸ್ಐ, ಪಿಸಿ, ಪಿಡಿಒ, ಎಫ್ಡಿಎ, ಎಸ್ಡಿಎ, ಕೆಪಿಎಸ್ಸಿ ಪರಿಕ್ಷೆಗಳಿಗೆ ಸಂಬಂಧಿಸಿದಂತೆ ಉಚಿತ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ನುರಿತ ಸಂಪನ್ಮೂಲ ವ್ಯಕ್ತಿಗಳಾದ ಗಂಗಾಧರಪ್ಪ, ಮರಿಗೌಡ್ರು ಮತ್ತು ಪೊಲೀಸ್ ಇಲಾಖೆಗೆ ಆಯ್ಕೆಯಾದ ಪಿಎಸ್ಐಗಳು ಭಾಗವಹಿಸಲಿದ್ದಾರೆ. ಸ್ಪರ್ಧಾರ್ಥಿಗಳು ಇದರ ಪ್ರಯೋಜನ ಪಡೆಯಬಹುದು. ಎಸ್ಎಸ್ಎಲ್ಸಿ ಪಿಯುಸಿ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ ಪಡೆದವರು ಆಯಾ ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾಭ್ಯಾಸಕ್ಕೆ ತಕ್ಕಂತೆ ತರಗತಿಗಳು ನಡೆಯುತ್ತವೆ ಎಂದು ತಿಳಿಸಿದರು.
ಅಚೀವರ್ಸ್ ಕೋಚಿಂಗ್ ಸೆಂಟರ್ ಅತ್ಯಂತ ಕಡಿಮೆ ದರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುತ್ತದೆ. ಸಾಮಾನ್ಯವಾಗಿ ಮೂರು ತಿಂಗಳ ತರಬೇತಿ ಇದಾಗಿದ್ದು, ಇದು ನಿರಂತರವಾಗಿ ನಡೆಯುತ್ತದೆ. ಈಗಾಗಲೇ ತರಬೇತಿ ಪಡೆದವರಿಗೆ ಮತ್ತು ಹೊಸಬರಿಗೆ ಮರು ಓದಿಗಾಗಿ ಒಂದು ತಿಂಗಳ ಉಚಿತ ಕಾರ್ಯಾಗಾರ ಹಮ್ಮಿಕೊಂಡಿದ್ದೇವೆ. 100 ಜನರಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು. ಷರತ್ತುಗಳು ಕೂಡ ಅನ್ವಯವಾಗುತ್ತವೆ . ಹೆಚ್ಚಿನ ವಿವರಕ್ಕೆ ಮೊಬೈಲ್ ಸಂಖ್ಯೆ 7337683668 ಸಂಪರ್ಕಿಸಬಹುದು.
ಸಂಪನ್ಮೂಲ ವ್ಯಕ್ತಿಗಳಾದ ಹೇಮಚಂದ್ರ, ಮಹೇಶ್, ವರುಣ್ ಇದ್ದರು.
UPSC Result | ಎರಡನೇ ಪ್ರಯತ್ನದಲ್ಲೇ UPSC ಪರೀಕ್ಷೆಯಲ್ಲಿ ಶಿವಮೊಗ್ಗದ ಮೇಘನಾ ಪಾಸ್, ಸಾಧನೆಯ ಗುಟ್ಟೇನು?