ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಸಮಾಜ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ಎರಡು ವರ್ಷಗಳ ತರಬೇತಿ ನೀಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
READ | ಕಾಂಗ್ರೆಸ್ ಆರನೇ ಗ್ಯಾರಂಟಿ ಬಗ್ಗೆ ಲೇವಡಿ ಮಾಡಿದ ಬಿ.ವೈ.ವಿಜಯೇಂದ್ರ
ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಜುಲೈ-15 ರವರೆಗೆ ವಿಸ್ತರಿಸಲಾಗಿದ್ದು, ಆಸಕ್ತರು ಇಲಾಖೆಯ ವೆಬ್ಸೈಟ್ www.sw.kar.nic.in ರ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-240512 ನ್ನು ಸಂಪರ್ಕಿಸುವುದು.