Jobs in shimoga | ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ, ವಿಷಯವಾರು ಮಾಹಿತಿ‌ ಇಲ್ಲಿದೆ

IMG 20220517 232257 102

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ (shimoga veterinary college) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ಗುತ್ತಿಗೆ ಆಧಾರಿತ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

READ | ಶಿವಮೊಗ್ಗ ಮೆಡಿಕಲ್‌ ಕಾಲೇಜಿನಲ್ಲಿ ಉದ್ಯೋಗ ಅವಕಾಶ

ಯಾವ್ಯಾವ ವಿಷಯಗಳಲ್ಲಿ ಹುದ್ದೆಗಳು ಖಾಲಿ?
ಪಶುವೈದ್ಯಕೀಯ ಶರೀರಕ್ರಿಯಾ ಮತ್ತು ಜೀವರಸಾಯನ ಶಾಸ್ತ್ರ ವಿಭಾಗ, ಜಾನುವಾರು ಉತ್ಪಾದನಾ ನಿರ್ವಹಣೆ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಔಷಧ ಹಾಗೂ ವಿಷಶಾಸ್ತ್ರ ವಿಭಾಗ, ಪಶುವೈದ್ಯಕೀಯ ಸಾರ್ವಜನಿಕ ಆರೋಗ್ಯ ಮತ್ತು ಸಮುದಾಯ ರೋಗ ಅಧ್ಯಯನ ಶಾಸ್ತ್ರ ವಿಭಾಗ, ಜಾನುವಾರು ಉತ್ಪನ್ನಗಳ ತಾಂತ್ರಿಕತೆ ವಿಭಾಗ, ಪಶುವೈದ್ಯಕೀಯ ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಶಸ್ತ್ರ ಚಿಕಿತ್ಸೆ ಮತ್ತು ಕ್ಷ-ಕಿರಣ ಶಾಸ್ತ್ರ ವಿಭಾಗ, ದೈಹಿಕ ಶಿಕ್ಷಣ ವಿಭಾಗ, ಪಶುವೈದ್ಯಕೀಯ ಸಂಕೀರ್ಣಶಾಸ್ತ್ರ (ಪಶುವೈದ್ಯಕೀಯ ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರ, ಪಶುವೈದ್ಯಕೀಯ ಶಸ್ತ್ರ ಚಿಕಿತ್ಸೆ ಮತ್ತು ಕ್ಷ-ಕಿರಣ ಶಾಸ್ತ್ರ ಪಶುವೈದ್ಯಕೀಯ ಚಿಕಿತ್ಸಾ ಶಾಸ್ತ್ರ, ಚಿಕಿತ್ಸಾ ರೋಗಶಾಸ್ತ್ರ/ಸೂಕ್ಷ್ಮಜೀವಾಣು ಶಾಸ್ತ್ರ/ ಪರೋಪಜೀವ ಶಾಸ್ತ್ರ/ ಜೀವರಸಾಯನ ಶಾಸ್ತ್ರ) ವಿಭಾಗಗಳಲ್ಲಿ ನೇಮಕ ಮಾಡಿಕೊಳ್ಳಲು ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿಯಮಾವಳಿಯಂತೆ ಹಾಗೂ ಮಾರ್ಗಸೂಚಿಯಂತೆ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
16ರಂದು ಸಂದರ್ಶನ
ಆಸಕ್ತರು ಜೂನ್ 16ರಂದು ಬೆಳಗ್ಗೆ 11ಕ್ಕೆ ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯ, ವಿನೋಬನಗರ, ಶಿವಮೊಗ್ಗ ಇಲ್ಲಿ ಹಾಜರಿದ್ದು, ಸಂದರ್ಶನದಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಜಾಲತಾಣ www.kvafsu.edu.in ಹಾಗೂ ದೂ.ಸಂ.: 08182-200872 ಅನ್ನು ಸಂಪರ್ಕಿಸುವುದು.

Mysuru Court | ಮೈಸೂರು ನ್ಯಾಯಾಲಯದಲ್ಲಿ 45 ಹುದ್ದೆಗಳು ಖಾಲಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು

error: Content is protected !!